ಕಾಪು : ಕಬ್ಬಿಣದ ಸೆಂಟ್ರಿಂಗ್‌ ಶೀಟು ಕಳ್ಳನ ಬಂಧನ!

ಕಾಪು ತಾಲೂಕು ಶಿರ್ವಾ ಗ್ರಾಮದ ಬಂಟಕಲ್ಲು ಎಂಬಲ್ಲಿ ಲೂಯಿಸ್‌ ಮಥಾಯಿಸ್‌ ಎಂಬುವರ ಮನೆಯ ಬಳಿ ಇಟ್ಟಿದ್ದ ಕಬ್ಬಿಣದ ಸೆಂಟ್ರಿಂಗ್‌ ಶೀಟುಗಳನ್ನು ಯಾರೋ ಕಳ್ಳರು ದಿನಾಂಕ 03.10.2025 ರಿಂದ 06.10.2025ರ ಮದ್ಯಾವಧಿಯಲ್ಲಿ ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 69/2025, ಕಲಂ: 303(2) ಬಿಎನ್‌ಎಸ್‌ ರಂತೆ ದಿ:10.10.2025 ರಂದು ಪ್ರಕರಣ ದಾಖಲಾಗಿರುತ್ತದೆ.

ಸದರಿ ಪ್ರಕರಣದ ತನಿಖೆಯನ್ನು ಕಾರ್ಕಳ ಸಹಾಯಕ ಪೊಲೀಸ್ ಅಧೀಕ್ಷಕರಾದ ಡಾ. ಹರ್ಷ ಪ್ರಿಯಂವದಾ ರವರ ನಿರ್ದೇಶನದಲ್ಲಿ, ತನಿಖಾಧಿಕಾರಿ ಮಂಜುನಾಥ ಮರಬದ ಪಿಎಸ್‌ಐ, ಶಿರ್ವ ಪೊಲೀಸ್‌ ಠಾಣೆ, ಲೋಹಿತ್‌ ಕುಮಾರ್‌ ಪಿಎಸ್‌ಐ, ಶಿರ್ವ ಪೊಲೀಸ್‌ ಠಾಣೆ, ಶಿರ್ವ ಠಾಣಾ ಸಿಬ್ಬಂದಿಯವರಾದ ಸಿದ್ಧರಾಯಪ್ಪ, ಶಿವಾನಂದಪ್ಪ ಮತ್ತು ಪಡುಬಿದ್ರೆ ಪೊಲೀಸ್‌ ಠಾಣಾ ಸಿಬ್ಬಂದಿಯವರಾದ ನವೀನ್‌, ಸಂದೇಶರವರ ತಂಡ ಆರೋಪಿ ರಶೀದ್‌ @ ರಶೀದ್‌ ಮೊಯಿದ್ದೀನ್‌(40),ತಂದೆ: ದಿ: ಕೆ ಮಹಮ್ಮದ್‌,  ಕುಂಬ್ರುಕೋಡ್ಲು, ಆಲಂದೂರು, ಶಿರೂರು ಗ್ರಾಮ, ಬೈಂದೂರು ತಾಲೂಕು ಎಂಬಾತನನ್ನು ದಸ್ತಗಿರಿ ಮಾಡಿ ವಿಚಾರಣೆಗೊಳಪಡಿಸಿದಾಗ ಆರೋಪಿಯು ಶಿರ್ವ ಪೊಲೀಸ್‌ ಠಾಣಾ ವ್ಯಾಪ್ತಿಯ ಬಂಟಕಲ್‌ ಹಾಗೂ ಪಂಜಿಮಾರ್‌, ಪಡುಬಿದ್ರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಎಲ್ಲೂರು ಹಾಗೂ ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಕಟ್‌ಬೆಳ್ತೂರ್‌ ಎಂಬಲ್ಲಿ ಕಬ್ಬಿಣದ ಶೀಟ್‌ಗಳನ್ನು ಕಳವು ಮಾಡಿರುವುದು ಪತ್ತೆಯಾಗಿದ್ದು, ಒಟ್ಟು 300 ಕಬ್ಬಿಣದ ಶೀಟ್‌ಗಳು ಹಾಗೂ ಆರೋಪಿಯು ಕೃತ್ಯಕ್ಕೆ ಬಳಸಿದ KA17C5970 ಮಹಿಂದ್ರ ಸುಪ್ರೋ ವಾಹನ ಸೇರಿ ಒಟ್ಟು 5,50,000/- ರೂಪಾಯಿ ಮೌಲ್ಯದ ಸ್ವತ್ತುಗಳನ್ನು ಸ್ವಾಧೀನ ಪಡಿಸಿಕೊಂಡಿರುತ್ತಾರೆ. ಸದರಿ ಆರೋಪಿಯ ವಿರುದ್ಧ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ 30 ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿರುವುದಾಗಿ ತಿಳಿದು ಬಂದಿರುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು