ಉಡುಪಿ : ಯಕ್ಷಗಾನ ಕೇಂದ್ರ ಇಂದ್ರಾಳಿ ಹಾಗೂ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್, ಮಣಿಪಾಲ ಸಹಯೋಗ ದಲ್ಲಿ, ಉಡುಪಿಯ ಎಂಜಿಎಮ್ ಕಾಲೇಜಿನ ರವೀಂದ್ರ ಮಂಟಪದಲ್ಲಿ, ಪೂರ್ಣಪ್ರಜ್ಞ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಶಿವಕುಮಾರ ಅಳಗೋಡು ರಚಿಸಿದ 'ಯಕ್ಷಗಾನ ಪೂರ್ವರಂಗ' ಕೃತಿ ಅನಾವರಣ, ಡಾ. ಕೆ. ಶಿವರಾಮ ಕಾರಂತರ 123ನೇ ಜನ್ಮದಿನಾಚರಣೆ ನೆರವೇರಲಿದೆ.
ಮಾಹೆಯ ಸಹಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಹಕುಲಪತಿ ಡಾ. ನಾರಾಯಣ ಸಭಾಹಿತ್, ಇಂದ್ರಾಳಿಯ ಯಕ್ಷಗಾನ ಕೇಂದ್ರದ ಸಲಹಾಸಮಿತಿಯ ಅಧ್ಯಕ್ಷ ಶ್ರೀ ಪಳ್ಳಿ ಕಿಶನ್ ಹೆಗ್ಡೆ, ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ಉಪಸ್ಥಿತರಿರಲಿದ್ದಾರೆ.
ಹಿರಿಯ ವಿದ್ವಾಂಸ ಡಾ. ಪಾದೇಕಲ್ಲು ವಿಷ್ಣು ಭಟ್ಟರು ಯಕ್ಷಗಾನ ಪೂರ್ವರಂಗ ಕೃತಿಯ ಕುರಿತು ಮಾತನಾಡಲಿದ್ದಾರೆ. ಕಾಪು ಸರಕಾರಿ ಪ್ರಥಮದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ರವಿರಾಜ್ ಶೆಟ್ಟಿ ಕಾರಂತರ ಸಂಸ್ಮರಣೆ ಮಾಡಲಿದ್ದಾರೆ. ಸಂಶೋಧನ ಸಹಾಯಕ ಡಾ. ಅರುಣ್ ಕುಮಾರ್ ಎಸ್. ಆರ್, ಕಾರ್ಯಕ್ರಮ ನಿರೂಪಿಸಲಿದ್ದಾರೆ. ಬಳಿಕ ಬಡಗುತಿಟ್ಟಿನ ಪ್ರಸಿದ್ಧ ಕಲಾವಿದರಿಂದ ಭೀಷ್ಮೋತ್ಪತ್ತಿ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.
0 ಕಾಮೆಂಟ್‌ಗಳು