ಮುಂಬಯಿ : ಕರ್ನಾಟಕ ಕರಾವಳಿ ಜಿಲ್ಲೆಗಳ ಅಭಿವೃದ್ದಿಗಾಗಿ ಕಳೆದ 25 ವರ್ಷಗಳಿಂದ ಕ್ರಿಯಾ ಶೀಲವಾಗಿರುವ ಸರಕಾರೇತರ ಸಂಘಟನೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ 25ನೇ ವಾರ್ಷಿಕ ಮಹಾಸಭೆಯು ಶುಕ್ರವಾರ ಅ. 10 ರಂದು ಸಂಜೆ 6 ಗಂಟೆಗೆ ಸರಿಯಾಗಿ ಪೆನಿನ್ಸುಲಾ ಗ್ರಾಂಡ್ ಹೋಟೆಲು, ಸಾಕಿನಾಕಾ, ಮುಂಬಯಿ ಇಲ್ಲಿ ಸಮಿತಿಯ ಸಂಸ್ಥಾಪಕರಾದ ತೋನ್ಸೆ ಜಯಕೃಷ್ಣ ಶೆಟ್ಟಿ ಯವರ ಉಪಸ್ಥಿತಿಯಲ್ಲಿ, ಅಧ್ಯಕ್ಷರಾದ ನಿತ್ಯಾನಂದ ಡಿ. ಕೋಟ್ಯಾನ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಬೆಳ್ಳಿ ಹಬ್ಬದ ಸಮಾರಂಭದಲ್ಲಿರುವ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯು ಈ ಸಭೆಯಲ್ಲಿ ಹಲವಾರು ಪ್ರಮುಖ ನಿರ್ಧಾರವನ್ನು ಕೈಗೊಳ್ಳಲಿದ್ದು ಸಮಿತಿಯ ಸರ್ವ ಸದಸ್ಯರು ಸಮಯಕ್ಕೆ ಸರಿಯಾಗಿ ಆಗಮಿಸಿ ಮಹಾಸಭೆಯನ್ನು ಯಶಸ್ವಿಗೊಳಿಸಬೇಕಾಗಿ ಸಮಿತಿಯ ಪರವಾಗಿ ಪ್ರಧಾನ ಕಾರ್ಯದರ್ಶಿ ಮುಂಡ್ಕೂರು ಸುರೇಂದ್ರ ಸಾಲ್ಯಾನ್ ವಿನಂತಿಸಿದ್ದಾರೆ.

0 ಕಾಮೆಂಟ್‌ಗಳು