​ಡಿ.7ರಂದು "ಲೊಂಬಾರ್ಡ್ ಆಸ್ಪತ್ರೆ ಉಡುಪಿ ಮ್ಯಾರಥಾನ್ 2025" 2ನೇ ಆವೃತ್ತಿಯ -ನೋಂದಣಿ ಆರಂಭ


ಉಡುಪಿ: ಉಡುಪಿ ರನ್ನರ್ಸ್ ಕ್ಲಬ್ ವತಿಯಿಂದ ಉಡುಪಿ ಸಿಎಸ್‌ಐ ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆಯ ಸಹಯೋಗದಲ್ಲಿ ಎರಡನೇ ಆವೃತ್ತಿಯ ಲೊಂಬಾರ್ಡ್ ಆಸ್ಪತ್ರೆ ಉಡುಪಿ ಮ್ಯಾರಥಾನ್ 2025 ಅನ್ನು ಇದೇ ಡಿ. 7ರಂದು ಉಡುಪಿ ಜಿಲ್ಲಾ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಮಿಷನ್‌ ಆಸ್ಪತ್ರೆಯ ನಿರ್ದೇಶಕ ಡಾ. ಸುಶೀಲ್ ಜತ್ತನ್ನ ತಿಳಿಸಿದರು.




ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಮ್ಯಾರಥಾನ್ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಿಂದ ಆರಂಭಗೊಂಡು ನಗರದ ಪ್ರಮುಖ ರಸ್ತೆಯಲ್ಲಿ ಸಾಗಿ ಜಿಲ್ಲಾ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಮುಕ್ತಾಯಗೊಳ್ಳಲಿದೆ ಎಂದರು.


ಈ ಮ್ಯಾರಥಾನ್ ನಲ್ಲಿ ವಿವಿಧ ವಯೋಮಾನದ ಪುರುಷರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳಿಗೆ 21 ಕಿ.ಮೀ., 10 ಕಿ.ಮೀ., 5ಕಿ.ಮೀ., 3 ಕಿ.ಮೀ., ಸ್ಯಾರಿ ರನ್ ಹಾಗೂ ಫನ್ ರನ್ ಆಯೋಜಿಸಲಾಗಿದೆ. ಮೊದಲ ಬಾರಿಗೆ ದೈಹಿಕ ಕ್ಷಮತೆ ಹಾಗೂ ಸಾಂಸ್ಕೃತೇಕವನ್ನು ಉತ್ತೇಜಿಸುವ ಉದ್ದೇಶದಿಂದ ಸ್ಯಾರಿ ಓಟವನ್ನು ಆಯೋಜಿಸಲಾಗಿದೆ. ಮ್ಯಾರಥಾನ್ ಎಲ್ಲಾ ವಿಭಾಗಗಳಲ್ಲಿ ಮೊದಲ 5 ಸ್ಥಾನಗಳಿಸಿದವರಿಗೆ ನಗದು ಬಹುಮಾನವನ್ನು ನೀಡಲಾಗು ವುದು. 



ಈ ಸ್ಪರ್ಧೆಯಲ್ಲಿ ದೇಶ ವಿದೇಶದಿಂದ ಸುಮಾರು 3000ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿ ಸುವ ನಿರೀಕ್ಷೆ ಇದೆ. ಸ್ಪರ್ಧೆಯಲ್ಲಿ ಭಾಗವಹಿಸುವವರು ಮೊಬೈಲ್ ಸಂಖ್ಯೆ 94816 77856 ಅಥವಾ Udupi_runners_club_urc e urcudupi@gmail.com ಸಂಪರ್ಕಿಸಬಹುದು ಎಂದು ಅವರು ತಿಳಿಸಿದರು.



ಸುದ್ದಿಗೋಷ್ಠಿಯಲ್ಲಿ ರನ್ನರ್ಸ್ ಕ್ಲಬ್ ಅಧ್ಯಕ್ಷ ತಿಲಕ್ ಚಂದ್ರಪಾಲ್, ಕಾರ್ಯದರ್ಶಿ ದಿವಾಕರ್ ಗಣಪತಿ ನಾಯಕ್, ಐಎಂಎ ಕರಾವಳಿ ಅಧ್ಯಕ್ಷ ಅಶೋಕ್ ಕುಮಾರ್ ಕಾಮತ್ ಇದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು