Header Ads Widget

ಕಾಪು : ಗೂಡ್ಸ್ ಟೆಂಪೋ ಪಲ್ಟಿ; ಐವರು ಕಾರ್ಮಿಕರು‌ ಸ್ಥಳದಲ್ಲೇ ಸಾವು!

ಕಾರ್ಮಿಕರು ಪ್ರಯಾಣಿಸುತ್ತಿದ್ದ ಗೂಡ್ಸ್ ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಐವರು ಕಾರ್ಮಿಕರು‌ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾಪು ಸಮೀಪದ ಕೋತಲ್‌ಕಟ್ಟೆ ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ಭಾನುವಾರ ಮಧ್ಯಾಹ್ನ ವೇಳೆ ನಡೆದಿದೆ.

ಕಾಪು ಮಜೂರಿನಿಂದ ಮಲ್ಪೆಗೆ ಡೆಕರೋಷನ್ ಸಂಬಂಧಿಸಿದ ಸಲಕರಣೆಗಳನ್ನು ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಹತ್ತಿ ರಸ್ತೆಯಲ್ಲಿ ಪಲ್ಟಿಯಾಗಿ ಬಿದ್ದಿದೆ ಎನ್ನಲಾಗಿದೆ.

ಟೆಂಪೋದಲ್ಲಿ ಒಟ್ಟು ಒಂಭತ್ತು ಮಂದಿ ಕೆಲಸಗಾರರು ಸಾಗುತ್ತಿದ್ದು, ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಇವರ ಪೈಕಿ ಐವರು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ವೇಳೆ ಮೃತಪಟ್ಟರೆಂದು ತಿಳಿದುಬಂದಿದೆ. ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು