BREAKING
ಭಕ್ತಿ ಪಥ

ಅಯೋಧ್ಯೆ ರಾಮನಿಗೆ ಉಡುಪಿಯಿಂದ ಸ್ವರ್ಣಾಭರಣ

ಅಯೋಧ್ಯೆ ರಾಮಮಂದಿರದ ಮೊದಲ ಮಹಡಿಯಲ್ಲಿ ನಿರ್ಮಿತವಾಗಿರುವ ಶ್ರೀರಾಮ ದರ್ಬಾರ್ ನಲ್ಲಿರುವ ಶ್ರೀರಾಮ‌ಪಟ್ಟಾಭಿಷೇಕದ ಶ್ರೀರಾಮ‌ಸೀತೆ ಲಕ್ಷ್ಮಣ ಭರತ ಶತ್ರುಘ್ನ ಆಂಜನೇಯ ವಿಗ್ರಹಗಳಿಗೆ ಉಡುಪಿಯಿಂದ ಸ್ವರ್ಣಾಭರಣಗಳನ್ನು ತಯಾರಿಸಿ ಅರ್ಪಿಸಲಾಗಿದೆ. ಮಂದಿರದ ಟ್ರಸ್ಟ್ ನವರ ಮನವಿಯಂತೆ ಉಡುಪಿಯ ಪ್ರಸಿದ್ಧ ಸ್ವರ್ಣ ಜ್ಯುವೆಲ್ಪರ್ಸ್ ನವರು ಕೇವಲ‌ ಹತ್ತು ದಿನಗಳಲ್ಲಿ ಈ ಆಭರಣಗಳನ್ನು ತಯಾರಿಸಿ ಕೊಟ್ಟಿದ್ದಾರೆ. ನಿನ್ನೆ ಸೋಮವಾರ ಸಂಸ್ಥೆಯ ಶ್ರೀ ಗುಜ್ಜಾಡಿ ದೀಪಕ್ ನಾಯಕ್ ಮತ್ತಿತರರು ಅಯೋಧ್ಯೆಗೆ ತೆರಳಿ ಈ ಆಭರಣಗಳನ್ನು ಶಿಲಾ ವಿಗ್ರಹಳಿಗೆ ತೊಡಿಸಿರುತ್ತಾರೆ . ಈ ಬಗ್ಗೆ ಅತೀವ ಸಂತಸ ವ್ಯಕ್ತಪಡಿಸಿರುವ ಸಂಸ್ಥೆಯ ಗುಜ್ಜಾಡಿ ರಾಮದಾಸ ನಾಯಕರು ಇದೊಂದು ನಿಜವಾಗಿಯೂ ನಮಗೆ ಅಪೂರ್ವ ಅವಕಾಶ .‌ಗುರುಹಿರಿಯರ ಪುಣ್ಯದಿಂದ ಲಭಿಸಿದೆ. ಅಯೋಧ್ಯೆ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡು ಪ್ರಧಾನಮಂತ್ರಿಯವರಿಂದ ಭಗವಾಧ್ವಜಾರೋಹಣದ ಹೊತ್ತಲ್ಲೇ ಈ ಆಭರಣ ತಯಾರಿಯ ಅವಕಾಶ ದೊರೆತದ್ದು ನಮ್ಮ "ಸ್ವರ್ಣ" ಕುಟುಂಬಕ್ಕೆ ಶಾಶ್ವತ ಸ್ಮರಣೀಯ ಕ್ಷಣವಾಗಿದೆ. ಈ ಹಿಂದೆ ಕಾಶಿ ಮಠಾಧೀಶರ ಆದೇಶದಂತೆ ಪೇಜಾವರ ಶ್ರೀಗಳ ಮಾರ್ಗದರ್ಶನದಲ್ಲಿ ಬೆಳ್ಳಿ ಪಲ್ಲಕ್ಕಿ ಸ್ವರ್ಣ ಅಟ್ಟೆ ಪ್ರಭಾವಳಿ ಕಂಠೀಹಾರ ಇತ್ಯಾದಿಗಳನ್ನು ನಿರ್ಮಿಸುವ ಅವಕಾಶವೂ ದೊರೆತಿತ್ತು ಎಂದೂ ಅವರು ಸ್ಮರಿಸಿದ್ದಾರೆ. ಈಗ ಪಟ್ಟಾಭಿಷೇಕದ ಎಲ್ಲಾ ವಿಗ್ರಹಗಳಿಗೆ ಕಾಲಿನ ನೂಪುರ, ಕಂಠೀಹಾರ ಕಿರೀಟ ಕರ್ಣ ಕುಂಡಲ ಸಹಿತ ಕಾಲಿನಿಂದ ತಲೆಯ ವರೆಗೆ ಎಲ್ಲಾ ಆಭರಣಗಳನ್ನು ತಯಾರಿಸಿ ತೊಡಿಸಲಾಗಿದೆ .


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

RAVIRAJ HP

RAVIRAJ HP
HAPPY DEEPAVALI

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!