Header Ads Widget

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಜಿಲ್ಲಾ ಕಾರ್ಯ ತಂಡದ ಸಭೆ

ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರು ನ.28ರಂದು ಬನ್ನಂಜೆಯ ಡಾ! ವಿ.ಎಸ್. ಆಚಾರ್ಯ ಬಸ್ ನಿಲ್ದಾಣದಿಂದ ಕಲ್ಸoಕ ಜಂಕ್ಷನ್ ವರೆಗೆ ರೋಡ್ ಶೋ ಮೂಲಕ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದು, 'ಲಕ್ಷ ಕಂಠ ಗೀತೋತ್ಸವ'ದ ಸಾಮೂಹಿಕ ಭಗವದ್ಗೀತಾ ಪಠಣದಲ್ಲಿ ಪಾಲ್ಗೊಂಡು ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲೆಯ ಮಹಾ ಜನತೆಯ ಸಹಿತ ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಮತ್ತು ಪಕ್ಷದ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಉಡುಪಿ ಕಾರಿಡಾರ್ ಯೋಜನೆ ಸಹಿತ ಜಿಲ್ಲೆಯ ಪ್ರಮುಖ ಅಭಿವೃದ್ಧಿ ಯೋಜನೆಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಸ್ತಾವನೆಯನ್ನು ಸಲ್ಲಿಸುವ ನಿಟ್ಟಿನಲ್ಲಿ ಈಗಾಗಲೇ ಜಿಲ್ಲೆಯ ಸಂಸದರು, ಶಾಸಕರು ಮತ್ತು ಪಕ್ಷದ ಪ್ರಮುಖರ ಸಮಾಲೋಚನಾ ಸಭೆಯಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಉಡುಪಿ ಪ್ರವಾಸದ ಹಿನ್ನೆಲೆಯಲ್ಲಿ ನ.19ರಂದು ಉಡುಪಿಗೆ ಬೇಟಿ ನೀಡಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಉಪಸ್ಥಿತಿಯಲ್ಲಿ ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ ನಡೆಯಲಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷಾಚರಣೆಯ ಅಂಗವಾಗಿ ಜಿಲ್ಲೆಯಾದ್ಯಂತ ನ.16ರಿಂದ 23ರ ವರೆಗೆ ನಡೆಯುವ ತಾಲೂಕು ಮಟ್ಟದ 'ಯುವ ಸಮ್ಮೇಳನ'ದಲ್ಲಿ ಯುವ ಸಮುದಾಯ ಗರಿಷ್ಠ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಿ ಸಂಘಟಿತ ಪ್ರಯತ್ನದ ಮೂಲಕ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು ಎಂದರು.

ಆತ್ಮ ನಿರ್ಭರ ಭಾರತ ಅಭಿಯಾನ, ಸ್ವದೇಶಿ ಮೇಳ ಹಾಗೂ ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್) ಕುರಿತು ವಿಶೇಷ ಅರಿವು ಮೂಡಿಸಿ, ಜಿಲ್ಲೆಯಾದ್ಯಂತ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಜೊತೆಗೆ ನ.30ರಂದು ನಡೆಯುವ ಪ್ರಧಾನಿ ಮೋದಿ ಅವರ 'ಮನ್ ಕೀ ಬಾತ್' ಕಾರ್ಯಕ್ರಮದ ನೇರ ಪ್ರಸಾರವನ್ನು ಜಿಲ್ಲೆಯ ಎಲ್ಲಾ 1,112 ಬೂತ್ ಗಳಲ್ಲಿ ವೀಕ್ಷಿಸಿ, ವೀಕ್ಷಣೆಯ ಫೋಟೋ ಮತ್ತು ವರದಿಯನ್ನು 'ಸರಲ್ ಆಪ್'ನಲ್ಲಿ ಅಪ್ಲೋಡ್ ಮಾಡುವ ಮೂಲಕ ಜಿಲ್ಲೆಗೆ ರಾಜ್ಯದಲ್ಲಿರುವ ಮುಂಚೂಣಿ ಸ್ಥಾನವನ್ನು ಕಾಯ್ದುಕೊಳ್ಳುವಂತೆ ಕುತ್ಯಾರು ವಿನಂತಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ಆತ್ಮ ನಿರ್ಭರ ಭಾರತ ಅಭಿಯಾನ, ಸ್ವದೇಶಿ ಮೇಳ ಹಾಗೂ ಯುವ ಸಮಾವೇಶಗಳ ಪೂರ್ವ ಸಿದ್ಧತೆಗಳ ಕುರಿತು ಮೋರ್ಚಾ ಮತ್ತು ಮಂಡಲವಾರು ಪ್ರಗತಿ ಪರಿಶೀಲನೆ ನಡೆಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆಯ (ಎಸ್ಐಆರ್) ಕುರಿತು ವಿಸ್ತ್ರತ ಮಾಹಿತಿ ನೀಡಿದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು, ಬಿಜೆಪಿ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಮತ್ತು ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು, ವಿವಿಧ ಅಭಿಯಾನಗಳ ಸಂಚಾಲಕರು ಉಪಸ್ಥಿತರಿದ್ದರು.

ಜಿಲ್ಲಾ ಉಪಾಧ್ಯಕ್ಷ ಸುರೇಶ್ ಶೆಟ್ಟಿ ಕಾಡೂರು ಸ್ವಾಗತಿಸಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಕಾರ್ಯದರ್ಶಿ ಗಿರೀಶ್ ಎಮ್. ಅಂಚನ್ ವಂದಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು