ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿಗೆ ಉಡುಪಿ ತಾಲೂಕಿನ 8 ಜನ ಪತ್ರಕರ್ತರ ಆಯ್ಕೆ.
ನೂತನ ಅಧ್ಯಕ್ಷರಾಗಿ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ಸುಬ್ರಹ್ಮಣ್ಯ ಜಿ.ಭಟ್(ಸುಜಿ ಕುರ್ಯ), ಪ್ರಧಾನ ಕಾರ್ಯದರ್ಶಿಯಾಗಿ ವಾರ್ತಾಭಾರತಿ ಪತ್ರಿಕೆಯ ಉಡುಪಿ ಜಿಲ್ಲಾ ವರದಿಗಾರ ನಝೀರ್ ಪೊಲ್ಯ ಹಾಗೂ ಕೋಶಾಧಿಕಾರಿಯಾಗಿ ಸುವರ್ಣ ಚಾನೆಲ್ ಉಡುಪಿ ಜಿಲ್ಲಾ ವಿಡಿಯೋ ಜರ್ನಲಿಸ್ಟ್ ಹರೀಶ್ ಕುಂದರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025-2028ನೇ ಸಾಲಿಗೆ ನಡೆದ ಚುನಾವಣೆಯಲ್ಲಿ ಈ ಆಯ್ಕೆ ಮಾಡಲಾಗಿದೆ.
ರಾಜ್ಯ ಕಾರ್ಯಕಾರಿಣಿ ಸಮಿತಿಯ ಸದಸ್ಯರಾಗಿ ಉದಯವಾಣಿ ಪತ್ರಿಕೆಯ ಹಿರಿಯ ಫೋಟೋ ಜರ್ನಲಿಸ್ಟ್ ಆಸ್ಟ್ರೋ ಮೋಹನ್, ಜಿಲ್ಲಾ ಕಾರ್ಯದರ್ಶಿಯಾಗಿ ಜಯಕಿರಣ ಪತ್ರಿಕೆಯ ಉಡುಪಿ ವರದಿಗಾರ ಉಮೇಶ್ ಮಾರ್ಪಳ್ಳಿ, ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯರುಗಳಾಗಿ ಜನಾರ್ದನ ಕೊಡವೂರು ಸಂಜೆ ಪ್ರಭ, ಪ್ರಜ್ವಲ್ ಅಮೀನ್ ಟಿವಿ 9, ಚೇತನ್ ಮಟಪಾಡಿ ಪಬ್ಲಿಕ್ ಟಿವಿ ಅವರನ್ನು ಆಯ್ಕೆ ಮಾಡಲಾಗಿದೆ.

0 ಕಾಮೆಂಟ್‌ಗಳು