ಮಣಿಪಾಲದ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದಲ್ಲಿ ನವೆಂಬರ್ 17 ಗರ್ಭಕಂಠದ ಕ್ಯಾನ್ಸರ್ ನಿರ್ಮೂಲನ ದಿನದ ಹಿನ್ನಲೆಯಲ್ಲಿ ವಿಶೇಷ ಮಾಹಿತಿ ಕಾರ್ಯಕ್ರಮ ಪ್ರಸಾರವಾಗಲಿದೆ.
ಮಣಿಪಾಲ ಮಾಹೆಯ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ ಸಂಸ್ಥೆಯಲ್ಲಿ ಗ್ಲೋಬಲ್ ಪಬ್ಲಿಕ್ ಹೆಲ್ತ್ ಮತ್ತು ಗೌವರ್ನೆನ್ಸ್ ವಿಭಾಗದ ಮುಖ್ಯಸ್ಥರಾಗಿರುವ ಡಾ. ಆರತಿ ರಾವ್ ಅವರು ವಿಶೇಷ ಮಾಹಿತಿ ನೀಡಲಿದ್ದಾರೆ. ಪ್ರಸನ್ನ ಸ್ಕೂಲ್ ಪಬ್ಲಿಕ್ ಹೆಲ್ತ್ ಸಂಸ್ಥೆಯಲ್ಲಿ ಪಿ. ಎಚ್ ಡಿ ಸಂಶೋಧನಾರ್ಥಿ ಅನುಶ್ರೀ ಪ್ರಭಾಕರನ್ ಸಂದರ್ಶಿಸಲಿದ್ದಾರೆ.
ಇದು ಸಂಜೆ 6.30ಕ್ಕೆ ಪ್ರಸಾರವಾಗಲಿದೆ. ಮತ್ತು ನಾಳೆ ಮಧ್ಯಾಹ್ನ 2.30ಕ್ಕೆ ಮರುಪ್ರಸಾರವಾಗಲಿದೆ.
ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ
https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

0 ಕಾಮೆಂಟ್‌ಗಳು