Header Ads Widget

ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಪರ್ಯಾಯ ಸ್ವಾಗತ ಸಮಿತಿಯ ಪದಾಧಿಕಾರಿಗಳ ಸಭೆ

ಭಾವೀ ಶ್ರೀ ಶೀರೂರು ಪರ್ಯಾಯ ಮಹೋತ್ಸವದ ಪೂರ್ವಭಾವಿ ಸಿದ್ಧತೆ ಕಾರ್ಯಗಳ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಪರ್ಯಾಯ ಸ್ವಾಗತ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ಶೀರೂರು ಪರ್ಯಾಯ ಸ್ವಾಗತ ಸಮಿತಿಯ ಅಧ್ಯಕ್ಷರಾದ ಉಡುಪಿ ಶಾಸಕ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿ ಅತ್ಯಂತ ಸುವ್ಯವಸ್ಥಿತವಾಗಿ ಪರ್ಯಾಯ ಮಹೋತ್ಸವ ನಡೆಸುವ ಬಗ್ಗೆ ಸಮಾಲೋಚನೆ ನಡೆಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಶ್ರೀಮತಿ ಟಿ. ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಶ್ರೀ ಅಬಿದ್ ಗದ್ಯಾಳ್, ಉಡುಪಿ ನಗರಸಭೆ ಪೌರಾಯುಕ್ತರಾದ ಶ್ರೀ ಮಹಾಂತೇಶ್ ಹಂಗರಗಿ, ಶ್ರೀಮಠದ ದಿವಾನರಾದ ಡಾ. ಉದಯ ಕುಮಾರ್ ಸರಳತ್ತಾಯ, ಪರ್ಯಾಯ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಟ್ಟಾರ್ ರತ್ನಾಕರ ಹೆಗ್ಡೆ, ಹೊರೆ ಕಾಣಿಕೆ ಸಮಿತಿ ಸಂಚಾಲಕರಾದ ಬೈಕಾಡಿ ಸುಪ್ರಸಾದ ಶೆಟ್ಟಿ, ಕಾರ್ಯದರ್ಶಿ ಶ್ರೀ ಮೋಹನ್ ಭಟ್, ಪ್ರಮುಖರಾದ ಶ್ರೀ ಕಿರಣ್ ಕುಮಾರ್ ಬೈಲೂರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು