Header Ads Widget

ಯುಪಿಎಂಸಿ: ಏಡ್ಸ್ ಜಾಗೃತಿ ಮತ್ತು ಅರಿವು ಕಾರ್ಯಕ್ರಮ

ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ಉಡುಪಿ ಹಾಗೂ ಐಸಿಟಿಸಿ ಸಮುದಾಯ ಆರೋಗ್ಯ ಕೇಂದ್ರ ಹೆಬ್ರಿ ಯ ಸಂಯುಕ್ತಾಶ್ರಯದಲ್ಲಿ ನವೆಂಬರ್ 19ರಂದು ಹೆಚ್ ಐ ವಿ / ಏಡ್ಸ್ ತಡೆಗಾಗಿ ತೀವ್ರಗೊಳಿಸಿದ ಪ್ರಚಾರಾಂದೋಲನ - 2025ರ ಅಂಗವಾಗಿ ಹೆಚ್ ಐ ವಿ ಮತ್ತು ಏಡ್ಸ್ ಕುರಿತು ಜಾಗೃತಿ ಕಾರ್ಯಕ್ರಮ ಜರಗಿತು. 

ಆಪ್ತ ಸಮಾಲೋಚಕರು ಸಮುದಾಯ ಆರೋಗ್ಯ ಕೇಂದ್ರ, ಹೆಬ್ರಿಯ ಶ್ರೀಮತಿ ಸರಸ್ವತಿಯವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಅವರು ಏಡ್ಸ್ ಹರಡುವ ವಿಧಾನ, ಏಡ್ಸ್ ರೋಗದ ಲಕ್ಷಣಗಳು ಹಾಗೂ ಏಡ್ಸ್ ರೋಗಿಗಳಿಗೆ ಇರುವ ಸರ್ಕಾರದ ಸೌಲಭ್ಯಗಳು ಮತ್ತು ಕಾರ್ಯಕ್ರಮದ ಕುರಿತು, ನಿಯಂತ್ರಣದ ಕ್ರಮಗಳ ಕುರಿತಾಗಿ ವಿವರಿಸಿದರು ಹಾಗೆಯೇ ಉಡುಪಿಯ ಭಾಗದಲ್ಲಿ ವಿದ್ಯಾರ್ಥಿಗಳು ಏಡ್ಸ್ ರೋಗಕ್ಕೆ ತುತ್ತಾಗುತ್ತಿರುವುದು ತುಂಬಾ ಖೇದನೀಯ ಎಂದು ವಿಷಾದಿಸಿದರು.

ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಆಶಾ ಕುಮಾರಿ ಅಧ್ಯಕ್ಷರಾಗಿದ್ದರು. 

ಎನ್ ಎಸ್ ಎಸ್ ನ ಯೋಜನಾಧಿಕಾರಿ ಶ್ರೀ ರಾಜೇಶ್ ಕುಮಾರ್, ಸಹ ಯೋಜನಾಧಿಕಾರಿ ಶ್ರೀ ಚಂದ್ರಶೇಖರ್ ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯರಾದ ದ್ವಿತೀಯ ಬಿ.ಕಾಂ ಸ್ಮಿತಾ ಸ್ವಾಗತಿಸಿ, ಭೂಮಿಕಾ ವಂದಿಸಿ, ಐಶ್ವರ್ಯ ಕಾರ್ಯಕ್ರಮ ನಿರೂಪಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು