ವಿಶ್ವ ಹಿರಿಯ ನಾಗರಿಕ ದಿನಾಚರಣೆ ಪ್ರಯುಕ್ತ ಕರ್ನಾಟಕ ಸರ್ಕಾರವು ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟವಾದ ಸೇವೆ ಸಲ್ಲಿಸಿದ ಹಿರಿಯ ನಾಗರಿಕ ವ್ಯಕ್ತಿ / ಹಿರಿಯ ನಾಗರಿಕರ ಕ್ಷೇತ್ರದಲ್ಲಿ ವಿಶಿಷ್ಟ ಸೇವೆಯನ್ನು ಸಲ್ಲಿಸಿರುವುದನ್ನು ಗುರುತಿಸಿ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿದೆ.
ಹಿರಿಯ ನಾಗರಿಕರ ಕಲಾಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಅನುಪಮ ಸೇವೆಯನ್ನು ಪರಿಗಣಿಸಿ ಪ್ರತಿ ವರ್ಷ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಾಧನೆಗೈದ 6 ವೈಯಕ್ತಿಕ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ರಾಜ್ಯ ಪ್ರಶಸ್ತಿಯನ್ನು ಮಾನ್ಯ ಮುಖ್ಯಮಂತ್ರಿಗಳು ನೀಡಿ ಗೌರವಿಸುತ್ತಿದ್ದಾರೆ. ೨೦೨೫ ನೇ ಸಾಲಿಗೆ ಕಲಾಕ್ಷೇತ್ರದಲ್ಲಿನ ಸಾಧನೆಗಾಗಿ ವೈಯಕ್ತಿಕ ರಾಜ್ಯ ಪ್ರಶಸ್ತಿಗೆ ಉಡುಪಿ ಕಲಾವಿದ ಶ್ರೀ ಪಿ ಎನ್ ಆಚಾರ್ಯ ರು ಆಯ್ಕೆಯಾಗಿರುತ್ತಾರೆ. ದಿನಾಂಕ 28-11-2025ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ವಿಶ್ವಹಿರಿಯ ನಾಗರಿಕರ ದಿನಾಚರಣೆಯ ಸಮಾರಂಭದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರಕಾರ, ಸನ್ಮಾನ್ಯ ಉಪಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ, ಮಾನ್ಯ ಸಚಿವರಾದ ಶ್ರೀಮತಿ ಲಕ್ಷ್ಮಿ ಆರ್ ಹೆಬ್ಬಾಳಕರ್‌ರವರು ಪ್ರಶಸ್ತಿ ಪತ್ರ, ಸ್ಮರಣಿಕೆ ಹಾಗೂ ರೂ. ಒಂದು ಲಕ್ಷ ನಗದು ಪ್ರಶಸ್ತಿ ಪತ್ರದೊಂದಿಗೆ ಸನ್ಮಾನಿಸಿದರು. ನಿರ್ದೇಶಕರಾದ ಶ್ರೀಮತಿ ರೂಪ ಆರ್., ಸರ್ಕಾರದ ಕಾರ್ಯದರ್ಶಿಗಳಾದ ಡಾಕ್ಟರ್ ಶಮ್ಲಾ ಇಕ್ಬಾಲ್ ರವರ ಉಪಸ್ಥಿತಿಯಲ್ಲಿ ನಡೆದ ಈ ಸಮಾರಂಭಕ್ಕೆ ಲಕ್ಷಾಂತರ ಜನ ಸಾಕ್ಷಿಯಾಗಿದ್ದರು.

0 ಕಾಮೆಂಟ್‌ಗಳು