Header Ads Widget

ರೆಡ್ ಕ್ರಾಸ್ ತರಬೇತಿ ಶಿಬಿರ ಉದ್ಘಾಟನೆ

 

ಉಡುಪಿ : ಪ್ರಥಮ ಚಿಕಿತ್ಸೆ ಮತ್ತು ಪ್ರಕೃತಿ ವಿಕೋಪದ ಕುರಿತಾದ ತರಬೇತಿಯ ಮೂಲಕ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಸಮಾಜಮುಖಿಯಾಗಲು ಉತ್ತಮ ಅವಕಾಶ. ಪ್ರಥಮ ಚಿಕಿತ್ಸೆಯ ತರಬೇತಿಯನ್ನು ಶೈಕ್ಷಣಿಕ ಸಂಸ್ಥೆಗಳಲ್ಲಿ ಸರಕಾರವು ಕಡ್ಡಾಯಗೊಳಿಸಬೇಕು ಎಂದು ಭಾರತೀಯ ರೆಡ್ ಕ್ರಾಸ್ ರಾಜ್ಯ ಸಭಾಪತಿ ಬಸರೂರು ರಾಜೀವ ಶೆಟ್ಟಿಯವರು ಹೇಳಿದರು. ಅವರು ಭಾರತೀಯ ರೆಡ್ ಕ್ರಾಸ್ ರಾಜ್ಯ ಘಟಕ ಮತ್ತು ಉಡುಪಿ ಜಿಲ್ಲಾ ಘಟಕ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಯುವ ರೆಡ್ ಕ್ರಾಸ್ ಘಟಕ ವತಿಯಿಂದ ಜಿಲ್ಲಾ ರೆಡ್ ಕ್ರಾಸ್ ಸಭಾಂಗಣದಲ್ಲಿ ನಡೆದ ರೆಡ್ ಕ್ರಾಸ್ ಅಧಿಕಾರಿಗಳು ಮತ್ತು ಸ್ವಯಂಸೇವಕರಿಗೆ ನಡೆದ ಒಂದು ದಿನದ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತಾನಾಡಿದರು. ಕುಂದಾಪುರ ರೆಡ್ ಕ್ರಾಸ್ ಸಭಾಪತಿ ಜಯಕರ ಎಸ್ ಶೆಟ್ಟಿ ಮಾತಾನಾಡಿ ಉಡುಪಿ ಜಿಲ್ಲೆಯು ರಕ್ತದಾನಿಗಳ ಜಿಲ್ಲೆ ಎಂದು ಗುರುತಿಸಲ್ಪಟ್ಟಿದೆ. ಈ ಪರಂಪರೆಯನ್ನು ರಕ್ತದಾನ ಮಾಡುವ ಮೂಲಕ ಮುಂದುವರೆಸುವ ಅಗತ್ಯವಿದೆ ಎಂದರು. ಮಂಗಳೂರು ವಿಶ್ವವಿದ್ಯಾನಿಲಯ ಯುವ ರೆಡ್ ಕ್ರಾಸ್ ನೋಡಲ್ ಅಧಿಕಾರಿ ಡಾ. ಗಾಯತ್ರಿ ಎನ್ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಯುವ ರೆಡ್ ಕ್ರಾಸ್ ಅನುಷ್ಠಾನದ ಬಗ್ಗೆ ಮಾತಾನಾಡಿದರು.

ಸ್ವಯಂಸೇವಕಿಯರ ರೆಡ್ ಕ್ರಾಸ್ ಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ರೆಡ್ ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿ ಸ್ವಾಗತಿಸಿದರು. ವಿದ್ಯಾರ್ಥಿಗಳಿಗೆ ರೆಡ್ ಕ್ರಾಸ್ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ರೆಡ್ ಕ್ರಾಸ್ ಆಡಳಿತ ಮಂಡಳಿಯ ಸದಸ್ಯ ಟಿ. ಚಂದ್ರಶೇಖರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಡಾ. ಕೀರ್ತಿ, ಅಶ್ವಿನ್ ಕುಮಾರ್, ಡಾ. ಸುರೇಶ್ ಶೆಣೈ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ರೆಡ್ ಕ್ರಾಸ್ ಖಜಾಂಚಿ ರಮಾದೇವಿ ವಂದಿಸಿದರು. ರೆಡ್ ಕ್ರಾಸ್ ಸದಸ್ಯರಾದ ರಾಘವೇಂದ್ರ ಪ್ರಭು ಕಾರ್ಯಕ್ರಮ ನಿರೂಪಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ಉಡುಪಿ ಜಿಲ್ಲಾ ವ್ಯಾಪ್ತಿಯ ರೆಡ್ ಕ್ರಾಸ್ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ತರಬೇತಿಯಲ್ಲಿ ಭಾಗವಹಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು