ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸಹಪಠ್ಯ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಭವಿಷ್ಯದಲ್ಲಿ ಉತ್ತಮ ನಾಗರಿಕರಾಗಿ ಬಾಳಬೇಕು ಎಂದು ಶಾಲಾ ಹಳೆ ವಿದ್ಯಾರ್ಥಿಯಾದ ಶ್ರೀ.ಯು ಮಿಥುನ್ ಮನೋಹರ್ ಶೆಣೈ ಅವರು ಅಭಿಪ್ರಾಯ ಪಟ್ಟರು.
ಕುಂಜಿಬೆಟ್ಟಿನ ಟಿ.ಎ.ಪೈ ಇಂಗ್ಲಿಷ್ ಮೀಡಿಯಂ ಹೈಸ್ಕೂಲಿನಲ್ಲಿ ನಡೆದ ಡ್ರಾಯಿಂಗ್, ಕರಕುಶಲ, ವಿಜ್ಞಾನ ಮಾದರಿ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿರುವ ಶ್ರೀ ಸಂತೋಷ್ ಜೋಗಿಯವರು ಮಾತನಾಡುತ್ತಾ ವಿದ್ಯಾರ್ಥಿಗಳ ಸುಪ್ತ ಪ್ರತಿಭೆ ಜಾಗೃತಿಗೊಳ್ಳಲು ಸಹಪಠ್ಯ ಚಟುವಟಿಕೆಗಳು, ವಿವಿಧ ಸ್ಪರ್ಧೆಗಳು ಸಹಕಾರಿ ಎಂದು ಹೇಳಿದರು. ಶಾಲಾ ರಕ್ಷಕ -ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ.ರಾಜೇಶ್ ರಾವ್ ಪಿ ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿನೋದಾ ಶೆಟ್ಟಿಯವರು ಅತಿಥಿಗಳಿಗೆ ಹೂ ಗುಚ್ಛ, ಸ್ಮರಣಿಕೆ ನೀಡಿ ಗೌರವಿಸಿದರು. ಕುಮಾರಿ ಚೈತ್ರಾಲಿ ಮಾಣಿಕ್ ಪಾಟೀಲ್ ಅತಿಥಿಗಳನ್ನು ಸ್ವಾಗತಿಸಿದರು. ವಿದ್ಯಾಥಿð ನವನೀತ್ ರವೀಂದ್ರ ಜಿ ಅತಿಥಿಗಳನ್ನು ಪರಿಚಯಿಸಿದರು. ಕುಮಾರಿ ಚೈತ್ರ ಎಂ ರಾವ್ ವಂದನಾರ್ಪಣೆಗೈದರು. ಕುಮಾರಿ ವೃದ್ಥಿ ಬಾಲಕೃಷ್ಣ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ಶ್ರೀಮತಿ ಮೃದುಲಾ ಮತ್ತು ಶ್ರೀಮತಿ ರೂಪಶ್ರೀ ಕಾರ್ಯಕ್ರಮವನ್ನು ಸಂಯೋಜಿಸಿದರು. ನಂತರ ವಿದ್ಯಾರ್ಥಿಗಳಿಂದ ʼದಕ್ಷಯಜ್ಞʼ ಯಕ್ಷಗಾನ ಪ್ರಸಂಗ ಸಂಪನ್ನಗೊಂಡಿತು.

0 ಕಾಮೆಂಟ್‌ಗಳು