Header Ads Widget

ಹೆಜಮಾಡಿ : ವೃದ್ಧೆಯ ಸರವನ್ನು ಎಗರಿಸಿದ ತಮಿಳುನಾಡು ಮೂಲದ ಕಳ್ಳಿಯರ ಬಂಧನ!

ಹೆಜಮಾಡಿ ಸಮೀಪದ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಸರವನ್ನು ಎಗರಿಸಿದ ತಮಿಳುನಾಡು ಮೂಲದ ಕಳ್ಳಿಯರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಶೀಥಲ್, ಕಾಳಿಯಮ್ಮ ಮತ್ತು ಮಾರಿ (40) ಎಂದು ಗುರುತಿಸಲಾಗಿದೆ.

ಗರಡಿಯಲ್ಲಿ ನೇಮೋತ್ಸವ ನಡೆಯುತ್ತಿದ್ದ ಸಂದರ್ಭ ಈ ಮೂವರು ಕಳ್ಳಿಯರು ಹೆಜಮಾಡಿ ನಿವಾಸಿ ಕಮಲ ಎಂಬುವವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಜನಸಂದಣಿಯ ಮಧ್ಯೆಯೇ ಎಗರಿಸಿದ್ದರು. ಈ ಕುರಿತ ವೀಡಿಯೊ ವೈರಲ್ ಆಗಿದ್ದು ಕಳ್ಳಿಯರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು. ಇದೀಗ ತಮಿಳುನಾಡು ಮೂಲದ ಮೂವರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು