Header Ads Widget

ಉಚ್ಚಿಲದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ ಉದ್ಘಾಟನೆ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಉಚ್ಚಿಲ, ಯಕ್ಷಗಾನ ಕಲಾರಂಗ ಉಡುಪಿ ಇವುಗಳ ಸಹಯೋಗದಲ್ಲಿ ಯಕ್ಷಶಿಕ್ಷಣ ಟ್ರಸ್ಟ್ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳದ ಆವರಣದಲ್ಲಿ ಆಯೋಜಿಸಿದ ಎಂಟು ಶಾಲೆಗಳ ಪ್ರದರ್ಶನವನ್ನು ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ. ಸಿ. ಕೋಟ್ಯಾನರು ಇಂದು (8.12.25)ಉದ್ಘಾಟಿಸಿ ಬಾಲ್ಯದಲ್ಲಿ ತಾನು ವೇಷ ಮಾಡಿದ ಹೃದ್ಯ ಅನುಭವವನ್ನು ನೆನಪಿಸಿಕೊಂಡರು. ಮಂಗಳೂರು ವಿಶ್ವ ವಿದ್ಯಾಲಯದ ನಿವೃತ್ತ ಕುಲ ಸಚಿವ ಡಾ. ಚಂದ್ರ ಶೇಖರ ಶೆಟ್ಟಿಯವರು ಮಾತನಾಡಿ ಯಕ್ಷಗಾನ ಸಂಗೀತ, ಸಾಹಿತ್ಯ, ಕುಣಿತ, ನಾಟ್ಯ, ಮಾತುಗಾರಿಕೆ ಎಲ್ಲವನ್ನೂ ಒಳಗೊಂಡಿರುವ ಪರಿಪೂರ್ಣ ಕಲಾಪ್ರಕಾರವಾಗಿದೆ ಎಂದರು. ದೇವಳದ ಆಡಳಿತ ಸಮಿತಿಯ ಅಧ್ಯಕ್ಷ ಗಿರಿಧರ ಸುವರ್ಣ, ಮೊಗವೀರ ಮಹಾಜನ ಸಂಘದ ಕಾರ್ಯದರ್ಶಿ ಶರಣ ಕುಮಾರ್, ಕೋಟೆಕಾರು ಕಲಾ ಗಂಗೋತ್ರಿಯ ಸದಾಶಿವ, ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಅಭ್ಯಾಗತರಾಗಿ ಭಾಗವಹಿಸಿದ್ದರು. ಕಲಾರಂಗದ ನಟರಾಜ ಉಪಾಧ್ಯ, ಗಣೇಶ ರಾವ್ ಎಲ್ಲೂರು ಉಪಸ್ಥಿತರಿದ್ದರು. ಟ್ರಸ್ಟಿ ವಿ. ಜಿ. ಶೆಟ್ಟಿ ಸ್ವಾಗತಿಸಿದರು. ನಾರಾಯಣ ಎಂ. ಹೆಗಡೆ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ವಂದಿಸಿದರು. ಮಹಾದೇವಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ 'ಶ್ರೀ ಮಹಾಗಣಪತಿ ಲಲಿತೋಪಾಖ್ಯಾನ' , ದಂಡತೀರ್ಥ ಆಂಗ್ಲ ಮಾಧ್ಯಮ ಪ್ರೌಢಶಾಲೆ ಕಾಪು ಇಲ್ಲಿಯ ವಿದ್ಯಾರ್ಥಿಗಳಿಂದ 'ಮೀನಾಕ್ಷೀ ಕಲ್ಯಾಣ' ಪ್ರಸಂಗ ಸೊಗಸಾಗಿ ಪ್ರಸ್ತುತಗೊಂಡಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು