ಕುಂದಾಪುರ : ಬಸ್ ಗೆ ಬೈಕ್ ಡಿಕ್ಕಿ; ಸವಾರ ಸಾವು!

ಓವರ್‌ಟೇಕ್ ಮಾಡುವ ಅವಿವೇಕವೇ ಅಮೂಲ್ಯ ಜೀವವನ್ನು ಕಸಿದುಕೊಂಡ ಮತ್ತೊಂದು ಘಟನೆ ಕುಂದಾಪುರ ತಾಲೂಕಿನ ಶೆಟ್ರಕಟ್ಟೆ ತಿರುವಿನಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.

ಮೃತ ಯುವಕನನ್ನು ಸೌಕೂರು ನಿವಾಸಿ ವಿಜಯ್ ದೇವಾಡಿಗ (26) ಎಂದು ಗುರುತಿಸಲಾಗಿದೆ.

ತ್ರಾಸಿಯಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದ ವಿಜಯ್ ಶನಿವಾರ ಬೆಳಿಗ್ಗೆ ಬೈಕಿನಲ್ಲಿ ತ್ರಾಸಿಯಿಂದ ಸೌಕೂರು ಕಡೆಗೆ ತೆರಳುತ್ತಿದ್ದ ವೇಳೆ ಶೆಟ್ರಕಟ್ಟೆ ತಿರುವಿನಲ್ಲಿ ಖಾಸಗಿ ಬಸ್ ಅನ್ನು ಓವರ್‌ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದ್ದಾರೆ.

ಢಿಕ್ಕಿಯ ರಭಸಕ್ಕೆ ವಿಜಯ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರಿಳೆದಿದ್ದಾರೆ. ಇತ್ತೀಚೆಗಷ್ಟೇ ಟಿಪ್ಪರ್ ಮತ್ತು ಸರ್ಕಾರಿ ಬಸ್ ನಡುವೆ ಇದೇ ಶೆಟ್ರಕಟ್ಟೆ ಪ್ರದೇಶದಲ್ಲಿ ನಡೆದ ಭೀಕರ ಅಪಘಾತದ ನೆನಪು ಇನ್ನೂ ಮಾಸುವ ಮುನ್ನವೇ ಮತ್ತೊಂದು ಅಪಘಾತ ಸಂಭವಿಸಿರುವುದು ಸ್ಥಳೀಯರಲ್ಲಿ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.

ಮಾಹಿತಿ ಪಡೆದ ಕುಂದಾಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತಗಳ ಸರಣಿ ನಡೆಯುತ್ತಿರುವ ಶೆಟ್ರಕಟ್ಟೆ ತಿರುವಿನಲ್ಲಿ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂಬ ಒತ್ತಾಯ ಸ್ಥಳೀಯರಿಂದ ಕೇಳಿಬರುತ್ತಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು