ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ 77ನೆಯ ಗಣರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣ ನೆರವೇರಿಸಿದ ಸಾಯಿ ರಾಧಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಮನೋಹರ್ ಎಸ್. ಶೆಟ್ಟಿಯವರು ಮಾತನಾಡಿ ಭಾರತವು ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ ದೇಶ. ಅನೇಕ ಮಹಾನ್ ನಾಯಕರ ತ್ಯಾಗದ ಫಲದಿಂದ ಇಂದು ನಾವು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ ಎಂದರು. ತಾನು ಬೆಳೆದುಬಂದ ದಾರಿಯ ಹೆಜ್ಜೆಗುರುತುಗಳನ್ನು ವಿದ್ಯಾರ್ಥಿಗಳಿಗೆ ವಿವರಿಸುತ್ತ ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗುವಂತೆ ಕರೆ ನೀಡಿದರು. ಗೌರವ ಅತಿಥಿಯಾಗಿ ಆಗಮಿಸಿ ಮಾತನಾಡಿದ ಹಿರಿಯ ವಕೀಲ ಶ್ರೀ ಉಮೇಶ್ ಶೆಟ್ಟಿ ಕಳತೂರು ವಿದ್ಯಾರ್ಥಿಗಳು ತಮ್ಮ ಹಕ್ಕನ್ನು ಪಡೆಯುದರ ಜೊತೆಗೆ ಸಮಾಜದಲ್ಲಿ ತಮ್ಮ ಜವಾಬ್ದಾರಿ ಮತ್ತು ಹೊಣೆಗಾರಿಕೆಯ ಕುರಿತು ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜಿನ ಅಧ್ಯಕ್ಷೆ ಶ್ರೀಮತಿ ರಶ್ಮಿ ಕೃಷ್ಣಪ್ರಸಾದ್ ಸಮಾಜ ನಮಗೆ ಏನು ಕೊಟ್ಟಿದೆ ಎನ್ನುದಂಕಿಂತ ಸಮಾಜಕ್ಕಾಗಿ ನಾವು ಏನು ಕೊಟ್ಟಿದ್ದೇವೆ ಎನ್ನುವುದನ್ನು ತಿಳಿದುಕೊಂಡರೆ ಇವತ್ತಿನ ಗಣರಾಜ್ಯೋತ್ಸವ ದಿನದ ಆಚರಣೆಗೆ ಅರ್ಥಬರುತ್ತದೆ ಎಂದರು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷರು, ಪ್ರಸಾದ್ ನೇತ್ರಾಲಯ ಸಮೂಹ ಕಣ್ಣಿನ ಆಸ್ಪತ್ರೆಗಳ ವೈಧ್ಯಕೀಯ ನಿರ್ದೇಶಕ ನಾಡೋಜ ಡಾ. ಕೃಷ್ಣಪ್ರಸಾದ್ ಕೂಡ್ಲುರವರು ಉಡುಪಿಯ ಪ್ರವಾಸೋಧ್ಯಮ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಶ್ರೀ ಮನೋಹರ್ ಎಸ್ ಶೆಟ್ಟಿಯವರ ಕೊಡುಗೆಗಳ ಬಗ್ಗೆ ವಿಧ್ಯಾರ್ಥಿಗಳಿಗೆ ತಿಳಿಸಿದರು. ದೇಶ ಕಟ್ಟುವಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳುವಂತೆ ಹೇಳುತ್ತಾ ಜನ್ಮ ಕೊಟ್ಟ ತಂದೆ ತಾಯಿ, ಕಲಿಸಿದ ಗುರು, ಕಲಿತ ಶಾಲೆಯನ್ನು ಯಾವಾಗಲೂ ಮರೆಯಬಾರದು ಎಂದು ವಿಧ್ಯಾರ್ಥಿಗಳಿಗೆ ಕರೆ ನೀಡಿದರು. ವೇದಿಕೆಯಲ್ಲಿ ಕಾಲೇಜಿನ ಸಿ ಓ ಓ ಡಾ. ಗೌರಿ ಪ್ರಭು ಉಪಸ್ತಿತರಿದ್ದರು.ಕಾರ್ಯಕ್ರಮದ ಮೊದಲಿಗೆ ಕಾಲೇಜಿನ ಕಾರ್ಡಿನೇಟರ್ ಶ್ರೀ ಮಾಧವ ಪೂಜಾರಿ ಎಲ್ಲರನ್ನು ಸ್ವಾಗತಿಸಿ, ವಿಧ್ಯಾರ್ಥಿ ಚರಣ್ ವಂದಿಸಿದರು. ಕು. ವೈಷ್ಣವಿ ಕಾರ್ಯಕ್ರಮ ನಿರೂಪಿಸಿದರು. ನಂತರ ವಿಧ್ಯಾರ್ಥಿಗಳಿಗೆ ಭಾರತದ ಸಂವಿಧಾನದ ಕುರಿತು ಕಟೀಲು ದುರ್ಗಾಪರಮೇಶ್ವರಿ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ. ಸುರೇಶ್ ಕಟೀಲ್ ರವರು ಉಪನ್ಯಾಸ ನೀಡಿದರು.

0 ಕಾಮೆಂಟ್‌ಗಳು