ರಾಷ್ಟ್ರೀಯ ಹೆದ್ದಾರಿಯ ಉಪ್ಪೂರು ಕೆ.ಜಿ ರೋಡ್ ಬಳಿ ಟ್ರಕ್ ಹರಿದು ಬೈಕ್ ಸವಾರನಾಗಿದ್ದ ಯುವಕ ಸ್ಥಳದಲ್ಲಿಯೇ ದಾರುಣವಾಗಿ ಸಾವನಪ್ಪಿದ ಭೀಕರ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
14 ಚಕ್ರದ ಟ್ರಕ್ ಅಡಿಗೆ ಸಿಲುಕಿ ಬೈಕ್ ಸವಾರನ ದೇಹವು ಛಿದ್ರಗೊಂಡಿದ್ದು, ದೇಹದಿಂದ ರುಂಡ ಬೆರ್ಪಟ್ಟು ಚಕ್ರದಡಿ ಸಿಲುಕಿಕೊಂಡಿರುವ ರಣ ಭೀಕರ ದೃಶ್ಯ ಬೆಚ್ಚಿಬೀಳಿಸುವಂತಿತ್ತು.
ಮೃತ ದುರ್ದೈವಿ ಬ್ರಹ್ಮವಾರ ಮಟಪಾಡಿಯ ನಿವಾಸಿ ಅಭಿಷೇಕ್ (25) ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬ್ರಹ್ಮಾವರ ಪೊಲೀಸ್ ಠಾಣೆಯ ಸಿಬಂದಿಗಳು ದೌಡಾಯಿಸಿದ್ದು ಶವವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ನೆರವಿನಿಂದ ಸಾಗಿಸಲಾಗಿದೆ.

0 ಕಾಮೆಂಟ್‌ಗಳು