ಬ್ರಹ್ಮಾವರ ಮಹೇಶ್ ಆಸ್ಪತ್ರೆ ಎದುರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಪರಿಶೀಲನೆ

ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿರುವ ಮಹೇಶ್ ಆಸ್ಪತ್ರೆ ಎದುರುಗಡೆ ರಾಷ್ಟ್ರೀಯ ಹೆದ್ದಾರಿ-66 ರ ಸಂಬಂಧಿತ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಅವರು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಕಾಮಗಾರಿಗಳ ಗುಣಮಟ್ಟ, ಸಾರ್ವಜನಿಕರ ಸಂಚಾರಕ್ಕೆ ಉಂಟಾಗುವ ಅಡಚಣೆಗಳು ಹಾಗೂ ಸುರಕ್ಷತಾ ಕ್ರಮಗಳ ಕುರಿತು ಎನ್‌.ಎಚ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಸ್ಥಳೀಯ ನಾಗರಿಕರಿಗೆ ಯಾವುದೇ ತೊಂದರೆ ಆಗದಂತೆ ಹಾಗೂ ಕಾಮಗಾರಿಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಸಂಸದರೊಂದಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಿತ್ಯಾನಂದ ಬಿ.ಆರ್ ಹಾಗೂ ಪಂಚಾಯತ್ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು