ಸುರ್ವೆ ಕಲ್ಚರಲ್‌ ಅಕಾಡೆಮಿ- ಸಾಂಸ್ಕೃತಿಕ ಕಲಾ ಪ್ರತಿಭೋತ್ಸವ, ವಿಚಾರ ಸಂಕಿರಣ

ಉಡುಪಿ: ಬೆಂಗಳೂರಿನ ಸುರ್ವೆ ಕಲ್ಚರಲ್‌ ಅಕಾಡೆಮಿ ಆಶ್ರಯದಲ್ಲಿ ರವೀಂದ್ರ ಕಲಾಕ್ಷೇತ್ರದ ಆವರಣ ದಲ್ಲಿರುವ ನಯನಾ ರಂಗಮಂದಿರದಲ್ಲಿ 74ನೇ ಸಾಂಸ್ಕೃತಿಕ ಕಲಾ ಪ್ರತಿಭೋತ್ಸವ ಮತ್ತು ಬುದ್ಧ-ಬಸವ-ಅಂಬೇಡ್ಕರ್‌ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ ಅಕಾಡೆಮಿಯ ವಿವಿಧ ಪ್ರಶಸ್ತಿ ಪ್ರದಾನ ನಡೆಯಿತು.

ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಆಡಳಿತ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾತನಾಡಿ, ಬುದ್ಧ, ಬಸವ ಮತ್ತು ಅಂಬೇಡ್ಕರ್‌ ವಿಚಾರಧಾರೆಗಳು ಸಮಾನತೆ, ಮಾನವೀಯತೆ ಮತ್ತು ಸಾಮಾಜಿಕ ನ್ಯಾಯಕ್ಕೆ ದಾರಿದೀಪಗಳಾಗಿವೆ. ಅವರ ವಿಚಾರಧಾರೆಗಳನ್ನು ಯುವಪೀಳಿಗೆ ಜೀವನದಲ್ಲಿ ಅಳವಡಿಸಿಕೊಂಡರೆ ಸಮಾಜ ಸುಸ್ಥಿತಿಯಲ್ಲಿರಲು ಸಾಧ್ಯ. ಇಂತಹ ಪ್ರತಿಭೋತ್ಸವಗಳು ನಾಡಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದರು.

ಬೆಳಗಾವಿ ಚಿಪ್ಪಲಕಟ್ಟಿ ಹಿರೇಮಠ ಡಾ| ಕಲ್ಲೇಶ್ವರ ಮಹಾಸ್ವಾಮಿ ಆಶೀರ್ವಚನ ನೀಡಿದರು. ಮಾಜಿ ಸಂಸದ ವಿ.ಎಸ್‌. ಉಗ್ರಪ್ಪ ಉಪಸ್ಥಿತರಿದ್ದರು. ಹಿರಿಯ ಪತ್ರಕರ್ತ, ಸಾಹಿತಿ ಡಾ| ಎಂ. ಲಕ್ಷಿ ¾àನಾರಾಯಣ ಅಧ್ಯಕ್ಷತೆ ವಹಿಸಿದ್ದರು. ಕೊಪ್ಪಳ ವಿಧಾನ ಪರಿಷತ್‌

ಸದಸ್ಯೆ ಹೇಮಲತಾ ನಾಯಕ್‌ ಪ್ರಶಸ್ತಿ ಪ್ರದಾನಿಸಿ ಶುಭ ಹಾರೈಸಿದರು.

ಕಲಬುರಗಿಯ ಗುಲ್ಬರ್ಗಾ ವಿ.ವಿ. ಡೀನ್‌ ಕಲಾನಿಕಾಯ ಪ್ರೊ| ಎಚ್‌.ಟಿ. ಪೋತೆ ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿದ್ದರು. ಚಿತ್ರನಟಿ ಮೀನಾ ಪಾಲ್ಗೊಂಡಿದ್ದರು. ಸುರ್ವೆ ಕಲ್ಚರಲ್‌ ಅಕಾಡೆಮಿ ವತಿಯಿಂದ ರಮಾನಂದ ಗುರೂಜಿಯವರನ್ನು ಸಮ್ಮಾನಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಅಕಾಡೆಮಿ ಪ್ರಶಸ್ತಿ ಪ್ರದಾನಿಸಲಾಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು