ಕಾಪು: ಸ್ಕೂಟಿಗೆ ಕಾರು ಡಿಕ್ಕಿ; ಯುವಕ, ಯುವತಿ ಗಂಭೀರ!

ಕಾಪು : ಎರ್ಮಾಳು ತೆಂಕ ನಾರಳ್ತಾಯ ಗುಂಡದ ಎದುರು ರಾಹೆ ೬೬ರಲ್ಲಿ ವಿರುದ್ಧ ದಿಕ್ಕಿನಿಂದ ಬಂದ ಕಾರೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯಲ್ಲಿದ್ದ ಮಣಿಪಾಲ ಕಾಲೇಜಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ತೀವ್ರ ಗಾಯಗೊಂಡ ಘಟನೆ ಭಾನುವಾರ ಬೆಳಿಗ್ಗೆ ಘಟಿಸಿದೆ.

ಉಡುಪಿ ಕಡೆಯಿಂದ ಮಂಗಳೂರು ಕಡೆಯಿಂದ ಸಾಗುತ್ತಿದ್ದ ಸ್ಕೂಟಿಗೆ ಎರ್ಮಾಳು ತೆಂಕ ನಾರಳ್ತಾಯ ಗುಂಡದ ಎದುರಿನ ತಿರುವಿನಲ್ಲಿ ವಿರುದ್ಧ ದಿಕ್ಕಿನಿಂದ ಬಂದ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದೆ.

ಸ್ಕೂಟಿಯಲ್ಲಿದ್ದ ಮಣಿಪಾಲ ಕಾಲೇಜು ವಿದ್ಯಾರ್ಥಿಗಳಾದ ಆರ್ಯನ್ ಕಶ್ಯಪ್ ನವೀನ್ (೨೨) ಮತ್ತು ಆರೋಹಿ ಖುರಾನಾ(೨೨) ತೀವ್ರ ಗಾಯಗೊಂಡು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಘಟನಾ ಸ್ಥಳಕ್ಕೆ ಸಮಾಜ ಸೇವಕ ಉಚ್ಚಿಲದ ಜಲಾಲುದ್ದೀನ್ ಮತ್ತು ಹಮೀದ್ ರವರು ಆಗಮಿಸಿ, ಎಸ್ಡಿಪಿಐ ಅಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪಡುಬಿದ್ರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು