ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು, ಅಪರ ಆಯುಕ್ತರ ಕಛೇರಿ, ಕಲಬುರಗಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೊಪ್ಪಳ, ಶಾಲಾ ಶಿಕ್ಷಣ ಇಲಾಖೆ ಕೊಪ್ಲಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಕಾರಟಗಿ ಕೊಪ್ಪಳ- ಇಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2025-26 ಇದರ ವೈಯಕ್ತಿಕ ವಿಭಾಗದ ಚಿತ್ರಕಲೆ ಸ್ಪರ್ಧೆಯಲ್ಲಿ ಉಡುಪಿ ಕುಂಜಿಬೆಟ್ಟಿನ ಟಿ.ಎ.ಪೈ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೆಯ ತರಗತಿಯ ವಿದ್ಯಾರ್ಥಿ ಚಿರಾಗ್ ವಿ ಶೆಟ್ಟಿ ಇವರು ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ವಿನೋದಾ ಶೆಟ್ಟಿಯವರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ. ಇವರು ಕಟಪಾಡಿಯ ಶ್ರೀಮತಿ ಪ್ರತಿಮಾ ಶೆಟ್ಟಿ ಮತ್ತು ಶ್ರೀ ವೆಂಕಟೇಶ್ ಶೆಟ್ಟಿ ದಂಪತಿಯ ಸುಪುತ್ರ.

0 ಕಾಮೆಂಟ್‌ಗಳು