ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟರ್‌ವೊಂದು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಶಿರ್ವ ಸಮೀಪದ ಪಂಜಿಮಾರು ಪಾಲಮೆಯಲ್ಲಿ ಫೆಬ್ರವರಿ 17ರ ಮಂಗಳವಾರ ಮಧ್ಯಾಹ್ನ ನಡೆದಿದೆ.
ಪಾಲಮೆಯ ನಿವಾಸಿಯೊಬ್ಬರು ಕೇವಲ ಒಂದು ತಿಂಗಳ ಹಿಂದಷ್ಟೇ ಮಂಗಳೂರಿನಲ್ಲಿ ಹೊಸ Honda Dio ಸ್ಕೂಟರ್ ಖರೀದಿಸಿದ್ದರು. ಮಂಗಳವಾರ ಮಧ್ಯಾಹ್ನ ಸ್ಕೂಟರ್ ಅನ್ನು ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ವೇಳೆ ಏಕಾಏಕಿ ಹೊಗೆ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದೆ.
ಬೆಂಕಿಯ ಜ್ವಾಲೆಗಳು ತೀವ್ರಗೊಂಡ ಪರಿಣಾಮ ಸ್ಕೂಟರ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

0 ಕಾಮೆಂಟ್‌ಗಳು