ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು : ಎನ್ ಎಸ್ ಎಸ್ ಶಿಬಿರ

ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವತಿಯಿಂದ ಎನ್ ಎಸ್ ಎಸ್ ಶಿಬಿರವು ಉದ್ಯಾವರ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಆಡಳಿತ ಮಂಡಳಿಯ ಸದಸ್ಯ ಶ್ರೀ ಕೃಷ್ಣಕುಮಾರ್ ಎಳೆವಯಸ್ಸಿನಲ್ಲಿಯೇ ಸೇವಾ ಮನೋಭಾವವನ್ನು ರೂಡಿಸಿಕೊಂಡು ನಾಯಕತ್ವ ಗುಣವನ್ನು ಅಳವಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು. ಬದಲಾಗುತ್ತಿರುವ ಪ್ರಪಂಚದಲ್ಲಿ ಸೃಷ್ಟಿಯಾಗುತ್ತಿರುವ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಾ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳಲು ಸೂಚಿಸಿದರು. 

ಶಾಲಾ ಸಂಚಾಲಕ ಸುರೇಶ್ ಶಣೈ, ಮುಖ್ಯೋಪಾಧ್ಯಾಯನಿ ಅನುರಾಧ ಶೆಟ್ಟಿ, ಬಿ ಆರ್ ಪಿ ಶೇಖರ್ ಬೋವಿ, ನಿವೃತ್ತ ವೃತ್ತಿ ಶಿಕ್ಷಕಿ ಮಂಜುಳಾ, ಶಿಕ್ಷಕರಾದ ರಾಮಚಂದ್ರ ಭಟ್, ನಾಗರತ್ನ ಹೆಗಡೆ, ಅನನ್ಯಾ ರಾವ್ ಭಾಗವಹಿಸಿದ್ದರು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ಇಂದಿರಾ ಅಧ್ಯಕ್ಷತೆ ವಹಿಸಿದ್ದರು ಜ್ಯೋತಿ ಸ್ವಾಗತಿಸಿ ವಸಂತ ಜೋಗಿ ವಂದಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು