ಕೀಳಂಜೆ ಶ್ರೀ ಮಹಾವಿಷ್ಣು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ಶ್ರೀ ಪೇಜಾವರ ಮಠಾಧೀಶ ಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಇಂದು ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ ನವೀಕರಣ ಕಾಮಗಾರಿಗಳನ್ನು ಪರಿಶೀಲಿಸಿದರು. ನೂತನ ಕೆರೆ ನಿರ್ಮಾಣವನ್ನು ಪ್ರಶಂಶಿಸಿದರು.
ಆದಷ್ಟು ಶೀಘ್ರದಲ್ಲಿ ಜೀರ್ಣೋದ್ಧಾರ ಕಾಮಗಾರಿ ಪೂರ್ಣಗೊಳ್ಳಲಿ ಎಂದು ಆಶಿಸಿದರು. ಈ ಸಂದರ್ಭದಲ್ಲಿbದೇವಳದ ಅರ್ಚಕರು ಹಾಗೂ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

0 ಕಾಮೆಂಟ್‌ಗಳು