ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ಪ್ರದಾನ ಮಾಡುತ್ತಿರುವ, ಶಂಕರ್ ರೂಫಿಂಗ್ ಸಿಸ್ಟಮ್ ದತ್ತಿ ನಿಧಿ ಪ್ರಯೋಜಿತ 'ಮಲಬಾರ್ ವಿಶ್ವರಂಗ ಪುರಸ್ಕಾರ 2026ಕ್ಕೆ ' ರಾಜ್ಯ ಮತ್ತು ಹೊರರಾಜ್ಯದ ಐವರು ಹಿರಿಯ ರಂಗಕರ್ಮಿಗಳು ಆಯ್ಕೆಯಾಗಿದ್ದಾರೆ.
ಗೀತಾ ಸುರತ್ಕಲ್ (ರಂಗ ನಟಿ), ಶ್ರೀಪತಿ ಮಂಜನಬೈಲು ಬೆಂಗಳೂರು (ರಂಗ ನಟ) ಎಸ್. ನಿತ್ಯಾನಂದ ಪೈ, ಕಾರ್ಕಳ( ರಂಗ ಸಂಘಟನೆ), ಅವಿನಾಶ್ ಕಾಮತ್ ಮುಂಬೈ ( ರಂಗ ನಟ), ಬಿ. ಎಸ್.ರಾಮ್ ಶೆಟ್ಟಿ ಹಾರಾಡಿ (ರಂಗ ನಿರ್ದೇಶನ ) ಇವರಿಗೆ ಮಾರ್ಚ್ 26ರಂದು ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ನಡೆಯುವ ವಿಶ್ವರಂಗಭೂಮಿ ದಿನಾಚರಣೆಯ ಸಂದರ್ಭದಲ್ಲಿ ನಗದು , ಪ್ರಶಸ್ತಿ ಪತ್ರ, ಫಲಕ ಹಾಗೂ ಬೆಳ್ಳಿ ಪದಕದೊಂದಿಗೆ 'ಮಲಬಾರ್ ವಿಶ್ವರಂಗ ಪುರಸ್ಕಾರ-2026' ಪ್ರದಾನ ಮಾಡಲಾಗುವುದು ಎಂದು ಸಮಿತಿಯ ಸಂಚಾಲಕ ರಾಜೇಶ್ ಭಟ್ ಪಣಿಯಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
9845240309

0 ಕಾಮೆಂಟ್‌ಗಳು