ಕಾಪು : ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆಬ್ರವರಿ 28 ರಿಂದ ಮೊದಲ್ಗೊಂದು ಮಾರ್ಚ್ 2ರವರೆಗೆ ಮೂರು ದಿನಗಳ ಪರ್ಯಂತ ಅತ್ಯಂತ ವಿಜ್ರಂಭಣೆಯಿಂದ ನಡೆಯಲಿರುವ ಕಾಪುವಿನ ಅಮ್ಮನ ಪುನರ್ ಪ್ರತಿಷ್ಠಾ ಪ್ರಥಮ ವರ್ಧಂತಿ ಉತ್ಸವ - "ಮಾತೃ ವೈಭವ" ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಫೆಬ್ರವರಿ 11ರ ಬುಧವಾರದಂದು ದೇವಳದ ಪ್ರಧಾನ ತಂತ್ರಿಗಳಾದ ವಿದ್ವಾನ್ ಕೆ ಪಿ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯಲ್ಲಿ ಪ್ರಾರ್ಥಿಸಿ ಚಪ್ಪರ ಮಹೂರ್ತವನ್ನು ನೆರವೇರಿಸಲಾಯಿತು.
ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿ ಮತ್ತು ಮಾತೃ ವೈಭವ ಸೇವಾ ಸಮಿತಿಯ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ಗೌರವಾಧ್ಯಕ್ಷ ಲಾಲಾಜಿ ಆರ್ ಮೆಂಡನ್, ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಮತ್ತು ಕಾಪು ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮನೋಹರ ಎಸ್ ಶೆಟ್ಟಿ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮತ್ತು ವ್ಯವಸ್ಥಾಪನಾ ಸಮಿತಿಯ ಸದಸ್ಯ ಮಾಧವ ಆರ್. ಪಾಲನ್, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಮತ್ತು ಮಾತೃ ವೈಭವ ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ಯೋಗೀಶ್ ವಿ.ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

0 ಕಾಮೆಂಟ್‌ಗಳು