ಉಡುಪಿ: ಇಂದಿನ ಆಧುನಿಕ ಯುಗದಲ್ಲಿ ಜನಸಾಮಾನ್ಯರು ಸೈಬರ್ ವಂಚನೆಗೆ ಬಲಿಯಾಗುತ್ತಿರುವುದು ಸಾಮಾನ್ಯ ವಿಷಯವಾಗಿದ್ದು, ಇದರಿಂದ ಸೈಬರ್ ಕ್ರೈಂ ಕುರಿತಾದ ಅರಿವು ಕಾರ್ಯಕ್ರಮ ವ್ಯಾಪಕವಾಗಿ ನಡೆಯಬೇಕಾಗಿದೆ. ಅದರಲ್ಲಿಯೂ ಹಿರಿಯನಾಗರಿಕರು ಈ ಬಗ್ಗೆ ಎಚ್ಚರವಹಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ತರಬೇತುದಾರ ರವಿರಾಜ ನಾಯಕ್ ಹೇಳಿದರು. ಅವರು ಉಡುಪಿ ಹಿರಿಯ ನಾಗರಿಕರ ಸಂಸ್ಥೆ, ಇನ್ನರ್ ವೀಲ್ ಕ್ಲಬ್ ಉಡುಪಿ ಮತ್ತು ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ಹಿರಿಯ ನಾಗರಿಕರಿಗಾಗಿ ರೆಡ್ ಕ್ರಾಸ್ ಭವನದಲ್ಲಿ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತಾನಾಡುತ್ತಿದ್ದರು.
ಉಡುಪಿ ಹಿರಿಯ ನಾಗರಿಕರ ಸಂಸ್ಥೆಯ ಅಧ್ಯಕ್ಷರಾದ ಕೆ. ಮುರಳೀಧರವರು ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಶ್ರೀಮತಿ ಮಾಲತಿ ತಂತ್ರಿಯವರು ಇನ್ನರ್ ವೀಲ್ ಕ್ಲಬ್‌ನ ಪರಿಚಯವನ್ನು ಮಾಡಿದರು. ಇನ್ನರ್ ವೀಲ್ ಕ್ಲಬ್‌ನ ಕಾರ್ಯದರ್ಶಿ ಶೈಲಾಮಯ್ಯ ಸಂಪನ್ಮೂಲ ವ್ಯಕ್ತಿಗಳ ಪರಿಚಯವನ್ನು ಮಾಡಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು, ಹಿರಿಯ ನಾಗರಿಕ ಸಂಸ್ಥೆಯ ಗೌರವಾಧ್ಯಕ್ಷ ಕೆ. ಸದಾನಂದ ಹೆಗ್ಡೆ, ಕಾರ್ಯದರ್ಶಿ ನಂದಕುಮಾರ್ ಉಪಸ್ಥಿತರಿದ್ದರು. ಜತೆ ಕಾರ್ಯದರ್ಶಿ ಶ್ರೀಮತಿ ಜಯತಂತ್ರಿ ವಂದಿಸಿದರು. ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ ಹಿರಿಯ ನಾಗರಿಕರು ಭಾಗವಹಿಸಿದ್ದರು.

0 ಕಾಮೆಂಟ್‌ಗಳು