ಸೃಜನಶೀಲತೆ ಮತ್ತು ವ್ಯಕ್ತಿ ವಿಕಸನದ ಕುರಿತಾದ ಜಿಲ್ಲಾ ಮಟ್ಟದ ತರಬೇತಿ ಶಿಬಿರ

 

ಉಡುಪಿ : ಸೃಜನಶೀಲತೆಯು ಪ್ರತಿಯೊಬ್ಬ ವ್ಯಕ್ತಿಯಲ್ಲಿ ಅಂತರ್ಗತವಾಗಿರುತ್ತದೆ. ಆ ಶಕ್ತಿಯನ್ನು ಹೊರಸೂಸಲು ಪರಿಣಾಮಕಾರಿ ತರಬೇತಿ ಅಗತ್ಯವಾಗಿದೆ. ತರಬೇತಿಯಿಂದ ಸೃಜನಶೀಲತೆಯು ಪಕ್ವಗೊಳ್ಳುತ್ತದೆ ಎಂದು ಭಾರತೀಯ ರೆಡ್‌ಕ್ರಾಸ್ ಕರ್ನಾಟಕ ಘಟಕದ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಹೇಳಿದರು. ಅವರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಭಾರತೀಯ ರೆಡ್‌ಕ್ರಾಸ್ ಘಟಕ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುವ ಸೃಜನಶೀಲತೆ ಮತ್ತು ವ್ಯಕ್ತಿ ವಿಕಸನದ ಕುರಿತಾದ ಎರಡು ದಿನಗಳ ಜಿಲ್ಲಾ ಮಟ್ಟದ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತಾನಾಡುತ್ತಿದ್ದರು. ಸಭೆಯ ಅಧ್ಯಕ್ಷತೆಯನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರಿನ ಪ್ರಾಂಶುಪಾಲ ಪ್ರೊ. ನಿತ್ಯಾನಂದ ಗಾಂವ್ಕರ್ ವಹಿಸಿದ್ದರು. 

 ವಿದ್ಯಾರ್ಥಿನಿಯರಾದ ಪ್ರೇಮಾ ಮತ್ತು ರಾಧಿಕಾ ಪ್ರಾರ್ಥಿಸಿದರು. ರೆಡ್‌ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಪ್ರಸ್ತಾವಿಕವಾಗಿ ಮಾತಾನಾಡಿ ಎರಡು ದಿನಗಳ ತರಬೇತಿಯ ಉದ್ದೇಶವನ್ನು ವಿವರಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಡಾ. ವಿವೇಕಾನಂದ ಟ್ರೆöÊನಿಂಗ್ ಎಸಿಟಿಯ ಡೀನ್ ತರಬೇತಿಯ ಸ್ವರೂಪವನ್ನು ವಿವರಿಸಿದರು. ರೆಡ್‌ಕ್ರಾಸ್‌ನ ಆಡಳಿತ ಮಂಡಳಿಯ ಸದಸ್ಯ ಟಿ. ಚಂದ್ರಶೇಖರ್ ಅತಿಥಿಗಳಾಗಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ಎಸಿಟಿ ಕೇಂದ್ರ ಹುಬ್ಬಳ್ಳಿಯ ಮುಖ್ಯಸ್ಥರಾದ ಯಶವಂತಿ ಉಪಸ್ಥಿತರಿದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಶೆಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ತರಬೇತಿಯಲ್ಲಿ ಉಡುಪಿ ಜಿಲ್ಲೆಯ ವಿವಿಧ ತಾಲೂಕುಗಳ ನೂರು ವಿದ್ಯಾರ್ಥಿಗಳು ಮತ್ತು ಯುವಕರು ಭಾಗವಹಿಸುತ್ತಿದ್ದಾರೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು