ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಉಡುಪಿ ಅಗ್ನಿಶಾಮಕ ಠಾಣೆಯಲ್ಲಿ ಅಗ್ನಿಶಾಮಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸತೀಶ್ ಅವರಿಗೆ, ಇಲಾಖೆಯು ಉತ್ತಮ ಹಾಗೂ ನಿಷ್ಠೆಯ ಸೇವೆಗಾಗಿ, ತುರ್ತು ಪರಿಸ್ಥಿತಿಯಲ್ಲಿ ಶ್ರೇಷ್ಠ ಕಾರ್ಯಕ್ಕಾಗಿ ಕೇಂದ್ರ ಸರ್ಕಾರದ ಗೃಹ ಮಂತ್ರಾಲಯವು ನೀಡುವ ಪದಕವನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಪೊಲೀಸ್ ಮಹಾನಿರ್ದೇಶಕರ ಉಪಸ್ಥಿತಿಯಲ್ಲಿ, ಇತ್ತೀಚೆಗೆ ಪಡೆದಿರುತ್ತಾರೆ.
2005 ರಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಗೆ ಸೇರ್ಪಡೆಗೊಂಡು ಆರ್.ಎ ಮುಂಡ್ಕೂರ್ ತರಬೇತಿ ವಿದ್ಯಾಲಯದಲ್ಲಿ ತರಬೇತಿ ಪಡೆದು 2006 ರಲ್ಲಿ ಮೂಡಬಿದ್ರೆ ಅಗ್ನಿಶಾಮಕ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ, 2018 ರಲ್ಲಿ ಮೈಸೂರು ಹೆಬ್ಬಾಳ ಅಗ್ನಿಶಾಮಕ ಠಾಣೆಗೆ ಪದೋನ್ನತಿ ವರ್ಗಾವಣೆ ಪಡೆದು ಪ್ರಸ್ತುತ ಉಡುಪಿ ಅಗ್ನಿಶಾಮಕ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ತಮ್ಮ ಕರ್ತವ್ಯದ ಅವಧಿಯಲ್ಲಿ ಜನರ ಪ್ರಾಣ ಹಾಗೂ ಆಸ್ತಿಗಳ ರಕ್ಷಣೆಗಾಗಿ ಹಲವು ಪುರಸ್ಕಾರಗಳು ಹಾಗೂ ಸೆಲ್ಯೂಟ್ ದ ಸೈಲೆಂಟ್ ಸ್ಟಾರ್ ಪ್ರಶಸ್ತಿಯನ್ನು ಪಡೆದಿರುತ್ತಾರೆ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

0 ಕಾಮೆಂಟ್‌ಗಳು