ಉಡುಪಿ: ಇಲ್ಲಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಬುಧವಾರದಂದು ರ (RUSA 1.0/PM-USHA) ಅನುದಾನದಡಿ 'ವೈವಿಧ್ಯತೆ, ಸಮಾನತೆ ಮತ್ತು ಒಳಗೊಳ್ಳುವಿಕೆ' ಕುರಿತ ಒಂದು ದಿನದ ರಾಜ್ಯಮಟ್ಟದ ಸಾಮರ್ಥ್ಯ ವೃದ್ಧಿ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಾದ ಕುಮಾರಿ ಮಂಜುಶ್ರೀ ಎನ್. ಅವರು ಆನ್‌ಲೈನ್ (Online) ಮೂಲಕ ಭಾಗವಹಿಸಿ, ಪ್ರಸ್ತುತ ಶೈಕ್ಷಣಿಕ ಸುಧಾರಣೆಗಳು ಮತ್ತು ಅವುಗಳ ಅನುಷ್ಠಾನದ ಬಗ್ಗೆ ದಿಕ್ಸೂಚಿ ಭಾಷಣ ಮಾಡಿದರು. ಪ್ರಾದೇಶಿಕ ಜಂಟಿ ನಿರ್ದೇಶಕಿ ಡಾ. ಕೆ. ಆರ್. ಕವಿತಾ ಮತ್ತು ಸಂಪನ್ಮೂಲ ವ್ಯಕ್ತಿಗಳಾದ ಡಾ. ಅಶೋಕ ಕಾಮತ್ ಹಾಗೂ ಡಾ. ಮಂಜುಳಾ ವಿ. ಅವರು ಜಂಟಿಯಾಗಿ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಂಟಿ ನಿರ್ದೇಶಕರು ತಮ್ಮ ಭಾಷಣದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಮಾನತೆ ಮತ್ತು ಒಳಗೊಳ್ಳುವಿಕೆಯ ಮಹತ್ವವನ್ನು ಒತ್ತಿ ಹೇಳಿದರು. ಸಂಪನ್ಮೂಲ ವ್ಯಕ್ತಿಗಳು ಈ ವಿಷಯಗಳ ಕುರಿತು ಆಳವಾದ ಉಪನ್ಯಾಸ ನೀಡಿ ಶಿಕ್ಷಕರ ಸಾಮರ್ಥ್ಯ ವೃದ್ಧಿಗೆ ಪೂರಕ ಮಾಹಿತಿ ನೀಡಿದರು. ಈ ವಿಶೇಷ ಕಾರ್ಯಾಗಾರದಲ್ಲಿ ವಿವಿಧ ಜಿಲ್ಲೆಗಳ ೧೦೦ಕ್ಕೂ ಹೆಚ್ಚು ಉಪನ್ಯಾಸಕರು ಉತ್ಸಾಹದಿಂದ ಭಾಗವಹಿಸಿದ್ದರು. ವೇದಿಕೆಯಲ್ಲಿ ರುಸಾ ಸಂಯೋಜಕಿ ಕವಿತಾ ಹಾಗೂ ಐಕ್ಯೂಎಸಿ ಸಂಯೋಜಕಿ ಪ್ರೊ. ಶ್ರೀಮತಿ ಅಡಿಗ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ. ಸೋಜನ್ ಕೆ. ಜಿ. ಅವರು ಸ್ವಾಗತಿಸಿದರು. ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಶ್ರೀ ಮಂಜುನಾಥ್ ವಂದಿಸಿದರು. ಆಂಗ್ಲ ವಿಭಾಗದ ಸಹ ಪ್ರಾಧ್ಯಾಪಕ ಶ್ರೀ. ಯೋಗೀಶ್ ಡಿ.ಎಚ್. ಕಾರ್ಯಕ್ರಮ ನಿರೂಪಿಸಿದರು.

0 ಕಾಮೆಂಟ್‌ಗಳು