ಬ್ರಹ್ಮಾವರ ತಾಲೂಕಿನ ಹಿರಿಯ ಪತ್ರಕರ್ತ, ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ (45) ಅವರು ಇಂದು ಬೆಳಿಗ್ಗೆ ಆತ್ಮಹತ್ಯೆಗೆ ಶರಣಾದರು.
ಬ್ರಹ್ಮಾವರ ಕ್ರಾಸ್ ಲ್ಯಾಂಡ್ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ ಅವರು ಇಂದು ಬೆಳಿಗ್ಗೆ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಕಳೆದ ಕೆಲವು ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಮೃತರು ಹೆಂಡತಿ ಓರ್ವ ಪುತ್ರ ಹಾಗೂ ತಂದೆ,ತಾಯಿ ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಶೇಷಗಿರಿ ಭಟ್ ಅವರ ನಿಧನ ಸುದ್ದಿ ಪತ್ರಿಕಾ ವಲಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಆಘಾತ ಮೂಡಿಸಿದೆ. ಅವರ ಅಕಾಲಿಕ ಅಗಲಿಕೆಗೆ ಬ್ರಹ್ಮಾವರ ಪತ್ರಕರ್ತ ಸಂಘದ ಅಧ್ಯಕ್ಷರು, ಸರ್ವ ಸದಸ್ಯರು, ಅವರ ಸಹೋದ್ಯೋಗಿಗಳು, ಸ್ನೇಹಿತರು ಹಾಗೂ ಹಿತೈಷಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

0 ಕಾಮೆಂಟ್‌ಗಳು