ಸುಮನಸಾ ಕೊಡವೂರು ನಾಟಕೋತ್ಸವ ರಂಗಹಬ್ಬ-14ರ ಮೂರನೇ ದಿನದ ಕಾರ್ಯಕ್ರಮ

ಉಡುಪಿ: ಯುವಪೀಳಿಗೆಗಳ ಪ್ರತಿಭೆ ಅರಳಲು, ಯುವಜನರು ಬೆಳೆಯಲು ರಂಗಭೂಮಿ ಸಹಕಾರಿ ಎಂದು ಉಡುಪಿ ತುಳುಕೂಟದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅಭಿಪ್ರಾಯಪಟ್ಟರು.

ಸುಮನಸಾ ಕೊಡವೂರು ಸಾಂಸ್ಕøತಿಕ ಸಂಘಟನೆಯ ನಾಟಕೋತ್ಸವ ರಂಗಹಬ್ಬ-14ರ ಮೂರನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸುಮನಸಾ ಸಂಸ್ಥೆಯ ಶಿಸ್ತು, ರಂಗ ಚಟುವಟಿಕೆ, ಸಮಾಜಮುಖಿ ಕಾರ್ಯಕ್ರಮಗಳು ಮಾದರಿಯಾದುದು. ಮಕ್ಕಳನ್ನು ಬೆಳೆಸುವ ಕ್ರಮವನ್ನು ಈ ಸಂಘಟನೆಯಿಂದ ಕಲಿಯಬೇಕು ಎಂದು ಸಲಹೆ ನೀಡಿದರು.

ರಂಗಚಟುವಟಿಕೆಗಳು ನಮ್ಮನ್ನು ಮಾನವೀಯಗೊಳಿಸುತ್ತವೆ. ಜನರನ್ನು ದಾರಿ ತಪ್ಪದಂತೆ ಸರಿದಾರಿಯಲ್ಲಿ ಒಯ್ಯುತ್ತವೆ. ಸಮಾಜದ ಅಂಕುಡೊಂಕುಗಳನ್ನು ರಂಗಭೂಮಿ ಎತ್ತಿ ತೋರಿಸುತ್ತದೆ ಎಂದು ಹೇಳಿದರು.

ರಂಗಸಾಧಕ ಸನ್ಮಾನ ಸ್ವೀಕರಿಸಿದ ಸಂಗೀತ ಗುರು ರಮೇಶ್ ಕೆ. ಪುತ್ತೂರು ಅವರು ಮಾತನಾಡಿ, ಸಂಗೀತ ಕಲಿಯುವುದು ನಮ್ಮ ಕಾಲದಲ್ಲಿ ಕಷ್ಟದ ಕೆಲಸವಾಗಿತ್ತು. ಈಗ ರೆಕಾರ್ಡ್ ಮಾಡಿಕೊಂಡು ಬಂದು ಹಾಡುತ್ತಾರೆ. ಕರೊಕೆ ಬಂದ ಮೇಲೆ ಹಾಡುಗಾರ ಬಿಟ್ಟರೆ ಬೇರೆ ಯಾವ ಪಕ್ಕವಾದ್ಯಗಳು ಬೇಡವಾಗಿವೆ" ಎಂದು ಬೇಸರ ವ್ಯಕ್ತಪಡಿಸಿದರು.

ಹಾರ್ಮೋನಿಯಂ ಹಿಡಿದುಕೊಂಡು ನಾನು ಸಂಗೀತ ಲೋಕಕ್ಕೆ ಕಾಲಿಟ್ಟೆ. ಹಲವು ನಾಟಕ, ನೃತ್ಯಗಳಿಗೆ ಸಂಗೀತ ಸಂಯೋಜನೆ ನಡೆಸಿದೆ. ಶಾಸ್ತ್ರೀಯ ಸಂಗೀತ ಕಲಿತು, ಕಲಿಸಿಕೊಟ್ಟಿದ್ದೇನೆ. ಇಂದು ಸಂಗೀತ ಸುಲಭವಾಗಿದೆ. ಆದರೆ, ನನಗೆ ರಂಗಭೂಮಿ ಮತ್ತು ಸಂಗೀತ ಬದುಕು ಕಟ್ಟಿಕೊಟ್ಟಿದೆ ಎಂದು ಸ್ಮರಿಸಿದರು.

ಉದ್ಯಮಿ ಸಾಧು ಸಾಲ್ಯಾನ್, ಉದ್ಯಮಿ ಮಹೇಶ್ ಶೆಣೈ, ಹೋಟೆಲ್ ಪಂಚರತ್ನ ಪ್ಯಾರಡೈಸ್ ಮಾಲೀಕ ಸಂತೋಷ್ ಶೆಟ್ಟಿ, ರಾಷ್ಟ್ರೀಯ ಬಿಲ್ಲವ ಈಡಿಗ ಮಹಾ ಮಂಡಳದ ಉಡುಪಿ ಜಿಲ್ಲಾ ಅಧ್ಯಕ್ಷ ಚಂದ್ರಶೇಖರ ಕಾಪು, ಹಿಂದೂ ಯುವಸೇನೆ ಉಡುಪಿ ಜಿಲ್ಲಾಧ್ಯಕ್ಷ ಅಜಿತ್ ಕೊಡವೂರು, ಸುಮನಸಾ ಕೊಡವೂರು ಸಾಂಸ್ಕøತಿಕ ಸಂಘಟನೆಯ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು ಉಪಸ್ಥಿತರಿದ್ದರು.

ಸುಮನಸಾ ಕೊಡವೂರು ಸಾಂಸ್ಕøತಿಕ ಸಂಘಟನೆಯ ಬಾಲಕೃಷ್ಣ ಶಿಬಾರ್ಲ ಸ್ವಾಗತಿಸಿದರು. ಶ್ರೀವತ್ಸ ವಂದಿಸಿದರು, ಗಣೇಶ್ ಸಗ್ರಿ ಕಾರ್ಯಕ್ರಮ ನಿರೂಪಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು