ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ!

ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬಜೆಟ್ ಅಧಿವೇಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಹೆಚ್ಚುತ್ತಿರುವ ಮೊಬೈಲ್ ಬಳಕೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನಲೆಯಲ್ಲಿ ಹಾಗೂ ಅಡ್ಡಪರಿಣಾಮ ತಡೆಗಟ್ಟುವ ಹಿನ್ನೆಲೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದರು.

ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 ಬಿ ಆರ್ ಸಿ ಕೇಂದ್ರಗಳಲ್ಲಿ ಓರ್ವ ಅರ್ಹ ಮಾನಸಿಕ ಆರೋಗ್ಯ ಸಲಹೆಗಾರ ನೇಮಕ ಮಾಡಲಾಗುವುದು ಎಂದು ಅವರು ಪ್ರಕಟಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು