ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ವೃತ್ತಿಪರ ಮತ್ತು ವೃತ್ತಿ ಮಾರ್ಗದರ್ಶಕ ಘಟಕವನ್ನು ಸ್ಥಾಪಿಸಲಾಗುತ್ತಿದ್ದು ಇದರ ಭಾಗವಾಗಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಅವರ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ಮುಂದಿನ ವೃತ್ತಿ ಜೀವನದ ಬಗ್ಗೆ ಮಾರ್ಗದರ್ಶನ ನೀಡಲು ನಗರದ ಎಂಜಿಎA ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕರಿಯರ್ ಮೇಳವನ್ನು ಆಯೋಜಿಸಲಾಗಿತ್ತು.
ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲ ಅಶೋಕ್ ಕಾಮತ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಹತ್ತನೇ ತರಗತಿ ಮತ್ತು ಪಿಯುಸಿ ಮುಗಿಸಿದ ವಿದ್ಯಾರ್ಥಿಗಳು ಉದ್ಯೋಗ ಆಧಾರಿತ ಕ್ಷೇತ್ರಗಳಲ್ಲಿ ತಮ್ಮ ಮುಂದಿನ ವಿದ್ಯಾಭ್ಯಾಸವನ್ನು ಕಂಡುಕೊಳ್ಳಲು ಸಹಾಯಕವಾಗುವ ನಿಟ್ಟಿನಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕರಿಯರ್ ಮೇಳವನ್ನು ಆಯೋಜಿಸಲಾಗಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳ ಮುಂದೆ ಹಲವಾರು ಆಯ್ಕೆಗಳಿದ್ದು ಯಾವ ಕ್ಷೇತರವನನು ಆಯ್ಕೆ ಮಾಡಲಿ ಎನ್ನುವ ಪ್ರಶ್ನೆ ಏಳುವುದು. ಇದಕ್ಕಾಗಿ ವಿದ್ಯಾರ್ಥಿಗಳು ತನ್ನ ನೆಚ್ಚಿನ ಕ್ಷೇತ್ರವನ್ನು ಆಯ್ಕೆ ಮಾಡಲು ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶಕ ಘಟಕವನ್ನು ಸ್ಥಾಪಿಸಿ ಜಿಲ್ಲೆಯ ಎಲ್ಲಾ ವಿದ್ಯಾ ಸಂಸ್ಥೆಗಳು ಹಾಗೂ ಲಭ್ಯವಿರುವ ಕೋರ್ಸ್ಗಳ ಮಾಹಿತಿಗಳನ್ನು ಒಂದೇ ಕಡೆ ದೊರೆಯುವಂತೆ ಮಾಡಲಾಗುವುದು. ಹತ್ತನೇ ತರಗತಿ ಮತ್ತು ಪದವಿ ಪೂರ್ವ ತರಗತಿ ಮುಗಿಸಿದ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಲೋಕೇಶ್ ಸಿ ಮಾತನಾಡಿ, ಕೃತಕ ಬುದ್ಧಿಮತ್ತೆಯ ಈ ಕಾಲಘಟ್ಟದಲ್ಲಿ ಉದ್ಯೋಗ ನಷ್ಟದ ಭೀತಿ ಎದುರಾಗಿದೆ. ವಿದ್ಯಾರ್ಥಿಗಳು ಯಾವುದೋ ಒಂದು ಕ್ಷೇತ್ರವನ್ನು ನೆಚ್ಚಿಕೊಳ್ಳದೆ ತಂತ್ರಜ್ಞಾನಾಧಾರಿತ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಂಡಲ್ಲಿ ಭವಿಷ್ಯದಲ್ಲಿ ಒಳ್ಳೆಯದಾಗಲಿದೆ. ಐಟಿಐ ಕ್ಷೇತ್ರದಲ್ಲಿ ವಿಪುಲ ಉದ್ಯೋಗಾವಕಾಶಗಳಿದ್ದು ವಿದ್ಯಾರ್ಥಿಗಳು ಈ ಕ್ಷೇತ್ರಗಳತ್ತವೂ ಗಮನ ಹರಿಸಬೇಕು ಎಂದರು.
ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ವಿಜಯಕುಮಾರ್ ವಿಶೇಷ ಉಪನ್ಯಾಸ ನೀಡಿದರು.
ಸರಕಾರದ ವಿವಿಧ ಇಲಾಖೆಗಳು, ಬ್ಯಾಂಕುಗಳು, ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ತಮ್ಮ ಮಳಿಗೆಗಳನ್ನು ಸ್ಥಾಪಿಸಿ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಶಿಕ್ಷಣ ಮತ್ತು ವೃತ್ತಿ ಸಂಬAಧಿತ ಮಾಹಿತಿಗಳನ್ನು ನೀಡಿದರು.
ಒಂಬತ್ತನೇ ತರಗತಿಯಿಂದ ಪದವಿಪೂರ್ವ ತರಗತಿವರೆಗೆ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳು ಅವರ ಪೋಷಕರು ಮತ್ತು ಸಾರ್ವಜನಿಕರು ಈ ಮೇಳದ ಪ್ರಯೋಜನವನ್ನು ಪಡೆದುಕೊಂಡರು.
ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಾರುತಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾರಾಯಣ ಸ್ವಾಮಿ, ಡಯಟ್ ಸದಸ್ಯ ಮನೋಜ್ ಕಡಬ ವಿದ್ಯಾಸಂಸ್ಥೆಗಳ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನ್ಯಾಸಕ ಡಾ. ಕಿಶೋರ್ ಕುಮಾರ್ ಶೆಟ್ಟಿ ನಿರೂಪಿಸಿ, ವಂದಿಸಿದರು.

0 ಕಾಮೆಂಟ್‌ಗಳು