ಕಟಪಾಡಿ : ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿ; ಸ್ಥಳದಲ್ಲಿ ಆತಂಕದ ವಾತಾವರಣ! ಸಾಲುಗಟ್ಟಿ ನಿಂತ ವಾಹನಗಳು!

ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರೊಂದು ಹೆದ್ದಾರಿಗೆ ಅಡ್ಡಲಾಗಿ ಮಗುಚಿಬಿದ್ದಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಬಳಿ ಸೋಮವಾರ (ಮಾ.16) ಸಂಭವಿಸಿದೆ.

ಅನಿಲ ಸೋರಿಕೆಯ ಭೀತಿಯಿಂದ ಕಟಪಾಡಿ ಜಂಕ್ಷನ್ ಬಳಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಘಟನೆಯಿಂದಾಗಿ ಹೆದ್ದಾರಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದೆ.

ಟ್ಯಾಂಕರ್ ಕಾರಿಗೆ ಡಿಕ್ಕಿ ಹೊಡೆದಿದ್ದು ಘಟನೆಯಲ್ಲಿ ಟ್ಯಾಂಕರ್ ಚಾಲಕ ಗಾಯಗೊಂಡಿದ್ದಾನೆ.

ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗುವ ಶಂಕೆ ಇದ್ದು ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳೀಯರನ್ನು ಟ್ಯಾಂಕರ್ ಬಳಿ ಬಾರದಂತೆ ಜೊತೆಗೆ ಮೊಬೈಲ್ ನಲ್ಲಿ ಫೋಟೋ ತೆಗೆಯದಂತೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ.

ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಧಾವಿಸಿ ಕಾರ್ಯಾಚರಣೆ ನಡೆಸುತ್ತಿದ್ದು, ಕಾಪು ಠಾಣೆ ಪಿಎಸ್ ಐ, ಆರಕ್ಷಕ ಸಿಬ್ಬಂದಿಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.      

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು