BREAKING
ರಾಜಕೀಯ

ಕಾಂಗ್ರೆಸ್ ಸಚಿವರ ವಿರುದ್ಧ ಗರಂ ಆಗಿ ಸದನದಿಂದ ಎದ್ದು ಹೋದ ಸ್ಪೀಕರ್ ಖಾದರ್!

ಶಾಸಕರ ಲಿಖಿತ ಪ್ರಶ್ನೆಗಳಿಗೆ ಸದನದಲ್ಲಿ ಲಿಖಿತ ಉತ್ತರ ಮಂಡಿಸಲು ವಿಫಲರಾದ ಸಚಿವರು ಮತ್ತು ಅಧಿಕಾರಿಗಳ ನಡೆ ವಿರುದ್ಧ ಅಸಮಾಧಾನಗೊಂಡ ಸ್ಪೀಕರ್‌ ಯು.ಟಿ.ಖಾದರ್‌ ಅವರು ಕಲಾಪ ನಡೆಸದೆ ಪೀಠದಿಂದ ಎದ್ದು ಹೊರ ನಡೆದ ಇತ್ತೀಚಿನ ದಶಕಗಳಲ್ಲೇ ಅಪರೂಪದ ಪ್ರಸಂಗ ಸೋಮವಾರ ವಿಧಾನಸಭೆಯಲ್ಲಿ ಜರುಗಿತು.

ಪ್ರಶ್ನೋತ್ತರ ಕಲಾಪದ ಬಳಿಕ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಶಾಸಕರ 230 ಲಿಖಿತ ಪ್ರಶ್ನೆಗಳ ಪೈಕಿ 84 ಪ್ರಶ್ನೆಗಳಿಗೆ ಉತ್ತರ ಮಂಡಿಸಿದರು.

ಇದಕ್ಕೆ ಆಕ್ಷೇಪಿಸಿದ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌, ಶೇ.50ರಷ್ಟೂ ಉತ್ತರ ಇಲ್ಲ. ಇದು ಸೇರಿ ಐದು ಬಾರಿ ಆಯಿತು. ಇದು ಕೂಡ ದಾಖಲೆ ಆಗಲಿ. ಸರ್ಕಾರ ಸತ್ತಿದೆ, ತಿಥಿ ಮಾಡಬೇಕು ಎನ್ನುವಂತಾಗಿದೆ. ನಿನ್ನೆ, ಮೊನ್ನೆ ನೀವು ಹೇಳಿದರೂ ಒಬ್ಬರೂ ಎಚ್ಚೆತ್ತುಕೊಂಡಿಲ್ಲ. ದೇವರ ರೀತಿ ಬಂದು ಕುಳಿತು ಬಳಿಕ ಮನೆಗೆ ಹೊರಟು ಹೋಗುತ್ತಾರೆ ಎಂದು ಆರೋಪಿಸಿದರು.

ಈ ವೇಳೆ ಮಂತ್ರಿಗಳು ಹಾಗೂ ಅಧಿಕಾರಿಗಳ ನಡೆಗೆ ತೀವ್ರ ಬೇಸರ ವ್ಯಕ್ತಪಡಿಸಿದ ಸ್ಪೀಕರ್‌ ಖಾದರ್‌, ನಾನು ಈ ಹಿಂದೆ ಸ್ಪಷ್ಟವಾಗಿ ಹೇಳಿದ್ದೇನೆ. ನಾವು ಅಧಿವೇಶನ ನಡೆಸುವುದು ಮಂತ್ರಿಗಳಿಗೆ ಅಲ್ಲ. ಶಾಸಕರು ಮೂರು ತಿಂಗಳಿಗೊಮ್ಮೆ ಸೇರಬೇಕು. ತಮ್ಮ ಕ್ಷೇತ್ರಗಳ ಸಮಸ್ಯೆಗಳ ಬಗ್ಗೆ ಚರ್ಚಿಸಬೇಕು ಎಂಬ ಕಾರಣಕ್ಕೆ ಅಧಿವೇಶನ ನಡೆಸುತ್ತೇವೆ. ಎಲ್ಲ ಪಕ್ಷಗಳ ಶಾಸಕರು ಪ್ರಶ್ನೆಗಳನ್ನು ಕೇಳುತ್ತಾರೆ. 15 ಪ್ರಶ್ನೆಗಳನ್ನು ಸ್ಟಾರ್‌ ಮಾಡಲಾಗುತ್ತದೆ. ನಿಯಮಾವಳಿಗಳ ಪ್ರಕಾರ ಉಳಿದ ಪ್ರಶ್ನೆಗಳಿಗೆ ಸರ್ಕಾರ ಲಿಖಿತ ಉತ್ತರ ಕೊಡಬೇಕು. ಉತ್ತರ ಕೊಡಲಿಲ್ಲ ಎಂದ ಮೇಲೆ ಶಾಸಕರು ಅಧಿವೇಶನಕ್ಕೆ ಏಕೆ ಬರಬೇಕು ಎಂದು ಖಾರವಾಗಿ ಪ್ರಶ್ನಿಸಿದರು.

ಈ ವಿಚಾರದಲ್ಲಿ ಗಂಭೀರವಾಗಿ ಇರಬೇಕು ಎಂದು ನಾಲ್ಕು ಬಾರಿ ಹೇಳಿದ್ದೆ. ಐದನೇ ಬಾರಿಯೂ ಸುಧಾರಣೆ ಕಾಣಲಿಲ್ಲ. ಈ ರೀತಿ ಧೋರಣೆ ಇದ್ದರೆ ಎಲ್ಲಾ ಸದಸ್ಯರು ಮೆಚ್ಚುವ ರೀತಿ ಸದನ ನಡೆಸುವುದು ಹೇಗೆ? ಸಂಬಂಧಿತ ಸಚಿವರು ಹಾಗೂ ಕಾರ್ಯದರ್ಶಿಗಳು ಏಕೆ ಹೀಗಾಯಿತು? ಸಮಸ್ಯೆ ಏನು ಎಂದು ಸ್ಪಷ್ಟನೆ ನೀಡುವ ತನಕ ಸದನ ನಡೆಸುವುದಿಲ್ಲ ಎಂದು ಸ್ಪೀಕರ್‌ ಖಾದರ್‌ ಪೀಠದಿಂದ ಎದ್ದು ಹೊರ ನಡೆದರು.

ಸಚಿವರು ಮತ್ತು ಅಧಿಕಾರಿಗಳ ವಿರುದ್ಧ ಸ್ಪೀಕರ್‌ ಖಾದರ್‌ ಸಿಟ್ಟಾಗಿ ಪೀಠದಿಂದ ಹೊರ ನಡೆದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ ಆರ್.ಅಶೋಕ್‌, ಸಚಿವರಾದ ಸತೀಶ್‌ ಜಾರಕಿಹೊಳಿ, ಜಿ.ಪರಮೇಶ್ವರ್‌, ಎಚ್‌.ಕೆ.ಪಾಟೀಲ್‌ ಮೊದಲಾದವರು ಸ್ಪೀಕರ್‌ ಕೊಠಡಿಗೆ ತೆರಳಿ ಚರ್ಚೆ ನಡೆಸಿದರು. ಲಿಖಿತ ಉತ್ತರ ನೀಡದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮುಖ್ಯಮಂತ್ರಿ ಭರವಸೆ ನೀಡಿದರು. ಸರ್ಕಾರ ಮುಖ್ಯ ಕಾರ್ಯದರ್ಶಿಯನ್ನು ಕರೆಸಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚಿಸಿದರು. ಈ ವೇಳೆ ಸರಿಯಾದ ರೀತಿ ಸದನ ನಡೆಸಲು ಸಂಪೂರ್ಣ ಸಹಕಾರ ನೀಡುವುದಾಗಿ ಸಚಿವರು ಅಭಯ ನೀಡಿದರು.

ಮನವೊಲಿಕೆ ಬಳಿಕ ಮತ್ತೆ ಕಲಾಪ ಆರಂಭಿಸಿದ ಸ್ಪೀಕರ್‌ ಖಾದರ್, ಲಿಖಿತ ಪ್ರಶ್ನೆಗಳಿಗೆ ಉತ್ತರ ನೀಡುವ ಸಂಬಂಧ ಮುಖ್ಯಮಂತ್ರಿ, ಸಚಿವರು ಮತ್ತು ವಿರೋಧ ಪಕ್ಷದ ನಾಯಕರ ಜೊತೆ ಚರ್ಚಿಸಿ ತೀರ್ಮಾನಿಸಲಾಗಿದೆ. ಭೋಜನ ವಿರಾಮದ ಬಳಿಕ ಸರ್ಕಾರ ಈ ಬಗ್ಗೆ ಉತ್ತರ ನೀಡಲಿದೆ ಎಂದು ಕಲಾಪವನ್ನು ಮುಂದೂಡಿದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!