ವಿಶ್ವಮಹಿಳಾ ದಿನಾಚರಣೆ- ಸಾಧಕ ಪುರಸ್ಕಾರಕ್ಕೆ ಲಿಲಾವತಿ ಗಂಗಾಧರ್ ಆಯ್ಕೆ

ಕೋಟ: ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಮಾರ್ಗದರ್ಶನದಲ್ಲಿ ಸ್ನೇಹಕೂಟ ಮಣೂರು ಇವರ ಸಹಯೋಗದೊಂದಿಗೆ ವಿಶ್ವಮಹಿಳಾ ದಿನಾಚರಣೆ ಕಾರ್ಯಕ್ರಮ ಇದೇ ಬರುವ ಮಾ.೯ರ ಸೋಮವಾರ ಬೆಳಿಗ್ಗೆ ೧೦.೩೦ಕ್ಕೆ ಕೋಟದ ಪಂಚವರ್ಣ ಕಛೇರಿಯಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿದೆ.

ಪಂಚವರ್ಣ ಮಹಿಳಾ ಸಾಧಕ ಪುರಸ್ಕಾರಕ್ಕೆ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತೆ ಸಾಸ್ತಾನ ಪಾಂಡೇಶ್ವರದ ಲಿಲಾವತಿ ಗಂಗಾಧರ್ ಆಯ್ಕೆಗೊಳಿಸಿದ್ದು ಗಣ್ಯರ ಸಮ್ಮುಖದಲ್ಲಿ ಈ ಪುರಸ್ಕಾರ ಪ್ರದಾನ ನಡೆಯಲಿದೆ ಎಂದು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್, ಸ್ನೇಹಕೂಟದ ಭಾರತಿ ವಿ ಮಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು