ಮಹಾವೀರ ಜಯಂತಿಯ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ!


ಮಹಾವೀರ ಜಯಂತಿ ಪ್ರಯುಕ್ತ ಘೋಷಿಸಲಾಗಿರುವ ಸಾರ್ವತ್ರಿಕ ರಜಾ ದಿನವನ್ನು ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ಮಾರ್ಪಡಿಸಿ ಸರಕಾರ ಆದೇಶ ಹೊರಡಿಸಿದೆ.

ಸರ್ಕಾರದ 2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯ ಅಧಿಸೂಚನೆ-1 & 11ರ ಕೋಷ್ಟಕದ ಕ್ರಮ ಸಂಖ್ಯೆ (5) ರಲ್ಲಿ ಈ ಬದಲಾವಣೆ ಮಾಡಲಾಗಿದೆ. ಈ ರಜೆಯನ್ನು ನೆಗೋಷಿಯಬಲ್ ಇನ್ನು ಮೆಂಟ್ ಆಕ್ಟ್, 1881 (1881ರ ಅಧಿನಿಯಮ ಸಂಖ್ಯೆ:26) ರನ್ವಯ ಸಹ ಘೋಷಿಸಿದೆ.

ಆದ್ದರಿಂದ ಮಾರ್ಚ್ 30ರಂದು ನಡೆಯಬೇಕಿದ್ದ (SSLC) ಪರೀಕ್ಷೆ-1ರ ತೃತೀಯ ಭಾಷೆ ಪರೀಕ್ಷೆಯನ್ನು ಮಾರ್ಚ್ 31ರ ಮಂಗಳವಾರಕ್ಕೆ ಮುಂದೂಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ತೃತೀಯ ಭಾಷೆ ವಿಷಯವನ್ನು ಹೊರತುಪಡಿಸಿ, ವೇಳಾಪಟ್ಟಿಯಲ್ಲಿರುವ ಉಳಿದ ಎಲ್ಲಾ ವಿಷಯಗಳ ಪರೀಕ್ಷೆಗಳು ಯಾವುದೇ ಬದಲಾವಣೆ ಇಲ್ಲದೆ ಮೊದಲಿನಂತೆಯೇ ನಡೆಯಲಿವೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು