ಕುಂದಾಪುರ ಗ್ರಾಮಾಂತರ ಎಸ್‌ಐ ನಾಸೀರ್ ಹುಸೇನ್ ನಿಧನ!

ಕುಂದಾಪುರ ಗ್ರಾಮಾಂತರ ಎಸ್‌ಐ ನಾಸೀರ್ ಹುಸೇನ್ (58) ಅವರು ಕುಸಿದುಬಿದ್ದು ಮೃತಪಟ್ಟಿದ್ದಾರೆ.

ಅವರು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಉಡುಪಿಯಲ್ಲಿ ಇಂದು ಬೆಳಗ್ಗೆ ಹಮ್ಮಿಕೊಂಡಿದ್ದ ಮ್ಯಾರಥಾನ್ ನಲ್ಲಿ ಪಾಲ್ಗೊಂಡಿದ್ದರು.

ಮ್ಯಾರಥಾನ್ ಓಡುತ್ತಿದ್ದ ನಾಸೀ‌ರ್ ಹುಸೇನ್ ಒಮ್ಮೆಲೆ ಕುಸಿದು ಬಿದ್ದು ತೀವ್ರವಾಗಿ ಅಸ್ವಸ್ಥಗೊಂಡರು. ಕೂಡಲೇ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ಅವರು ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ. ನಾಸಿ‌ರ್ ಹುಸೇನ್ ಅವರು ಉಡುಪಿ ಜಿಲ್ಲೆಯ ಅಮಾಸೆಬೈಲು, ಕುಂದಾಪುರ ನಗರ, ಕುಂದಾಪುರ ಸಂಚಾರ ಠಾಣೆ, ಶಂಕರನಾರಾಯಣ, ಕಾರ್ಕಳ ಗ್ರಾಮಾಂತರ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಠಾಣೆಯಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು