ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ ಉಡುಪಿ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಸಂದರ್ಭದಲ್ಲಿ ಉಡುಪಿ ಜ್ಯುವೆಲರ್ಸ್ ಅಸೋಸಿಯೇಷನ್ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು.ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ ಹಾಗೂ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೆಕಾರು ಹಾಗೂ ಉಡುಪಿ ಜ್ಯುವೆಲರ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಯು ವಸಂತ್ ರೈ, ಉಪಾದ್ಯಕ್ಷರಾದ ಜಿ ಮಂಜುನಾಥ್ ಶೇಟ್, ಕಾರ್ಯದರ್ಶಿ ಕೆ ಪ್ರವೀಣ್ ಶೇಟ್, ಜೊತೆ ಕಾರ್ಯದರ್ಶಿ ಮೋಹನ್ ಎಂ.ಪಿ,ಕೋಶಾಧಿಕಾರಿ ಸದಾನಂದ ಪೂಜಾರಿ,ಜಿ ಜಯ ಆಚಾರ್ಯ, ವೀರೇಂದ್ರ ಶೇಟ್,ಬಿ. ಸತ್ಯನಾರಾಯಣ ಶೇಟ್ ಉಪಸ್ಥಿತರಿದ್ದರು.

0 ಕಾಮೆಂಟ್‌ಗಳು