ಉಡುಪಿ : ವಸತಿಗೃಹದಲ್ಲಿ ಕೊಠಡಿ ಪಡೆದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ಉಡುಪಿ : ನಗರದ ಹಳೆ ಸರಕಾರಿ ಬಸ್ಸು ನಿಲ್ದಾಣದ ಸನಿಹದ ವಸತಿ ಗೃಹದಲ್ಲಿ ಕೊಠಡಿ ಪಡೆದುಕೊಂಡಿದ್ದ ವ್ಯಕ್ತಿಯೊಬ್ಬರು ಫ್ಯಾನಿಗೆ ಬಟ್ಟೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರವಿವಾರ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯ ಹೆಸರು ಜಿನ್ಸನ್ ಪಿ. ಎಮ್, ಪುತ್ತೂರು ನೆಲ್ಯಾಡಿ ನಿವಾಸಿ ಎಂದು‌ ತಿಳಿದುಬಂದಿದೆ.

ನಗರ ಪೋಲಿಸ್ ಠಾಣೆಯ‌ ಠಾಣಾಧಿಕಾರಿ ಭರತೇಶ್, ಪಿ ಎಸ್ ಐ ನಾರಾಯಣ, ಎ.ಎಸ್.ಐ ವಿಜಯ್ ಘಟನಾ ಸ್ಥಳದಲ್ಲಿದ್ದು, ಮಹಜರು ಪ್ರಕ್ರಿಯೆ ನಡೆಸಿದರು.

ಸಮಾಜಸೇವಕ ನಿತ್ಯಾನಂದ ಒಳಕಾಡುವರು ಶವವನ್ನು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು