ಕ್ಷಯರೋಗದ ಶಾಶ್ವತ ನಿರ್ಮೂಲನೆಗೆ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲಿ : ಮನು ಪಟೇಲ್ ಬಿ.ವೈ

ಕ್ಷಯರೋಗವು ಸಾರ್ವಜನಿಕ ಆರೋಗ್ಯ ವಲಯದಲ್ಲಿ ಸವಾಲನ್ನು ಒಡ್ಡುತ್ತಿದ್ದು, ದೇಶದಲ್ಲಿಯೇ ಕ್ಷಯರೋಗ ಮರಣ ತರುವ ಗಂಭೀರ ಕಾಯಿಲೆಗಳಲ್ಲಿ ಮೊದಲನೇ ಸ್ಥಾನದಲ್ಲಿದೆ. ಕ್ಷಯರೋಗವನ್ನು ಶಾಶ್ವತವಾಗಿ ನಿರ್ಮೂಲನೆ ಮಾಡುವ ಸಂಕಲ್ಪದೊAದಿಗೆ ಎಲ್ಲಾ ಸಂಬAಧಪಟ್ಟ ಇಲಾಖೆಗಳು, ಸಮನ್ವಯದಿಂದ ಕಾರ್ಯನಿರ್ವಹಿಸುವುದರೊಂದಿಗೆ ಉಡುಪಿ ಜಿಲ್ಲೆಯನ್ನು ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಲು ಸಹಕರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ಬಿ.ವೈ ಹೇಳಿದರು.

  ಅವರು ಇಂದು ನಗರದ ಅಜ್ಜರಕಾಡು ಇಲ್ಲಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಶ್ರೀಕೃಷ್ಣ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ವಿಶ್ವ ಕ್ಷಯ ರೋಗ ದಿನಾಚರಣೆ, ಕ್ಷಯ ಮುಕ್ತ ಗ್ರಾಮ ಪಂಚಾಯತ್‌ಗಳಿಗೆ ಪ್ರಶಸ್ತಿ ಪ್ರಧಾನ ಸಮಾರಂಭ ಮತ್ತು ಕ್ಷಯ ಮುಕ್ತ ಭಾರತ್ 100 ದಿನಗಳ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. 

 ಜಿಲ್ಲೆಯನ್ನು ಕ್ಷಯಮುಕ್ತವಾಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ನಿರ್ದೇಶನದಂತೆ ನೂರು ದಿನಗಳ ಕ್ಷಯರೋಗ ಪತ್ತೆ ಹಚ್ಚುವ ಅಭಿಯಾನವನ್ನು ಇಂದಿನಿAದ ಹಮ್ಮಿಕೊಳ್ಳಲಾಗುತ್ತಿದ್ದು, ಅಭಿಯಾನದಲ್ಲಿ ಕ್ಷಯರೋಗಿಗಳನ್ನು ಪತ್ತೆಹಚ್ಚಿ, ಅವರುಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವುದರೊಂದಿಗೆ ಅವರು ಸಂಪೂರ್ಣವಾಗಿ ಗುಣಮುಖರಾಗುವವರೆಗೂ ಅವರ ಮೇಲೆ ಆರೋಗ್ಯ ಇಲಾಖೆ ನಿಗಾವಹಿಸಲಿದೆ ಎಂದರು. 

 ಅಭಿಯಾನದಲ್ಲಿ ಜನರ ಆರೋಗ್ಯ ಕಾಪಾಡುವಲ್ಲಿ ಪಂಚಾಯತ್ ಅಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳೊAದಿಗೆ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮಹತ್ವದ ಪಾತ್ರ ವಹಿಸಲಿದ್ದು, ಸಾಂಕ್ರಾಮಿಕ ರೋಗಗಳ ಬಗ್ಗೆ ಗ್ರಾಮೀಣ ಭಾಗ ಸೇರಿದಂತೆ ಎಲ್ಲಾ ಭಾಗಗಳಲ್ಲಿ ವ್ಯಾಪಕ ಅರಿವು ಮೂಡಿಸುವ ಕೆಲಸವಾಗಬೇಕು. ಕ್ಷಯರೋಗದ ಕುರಿತು ಜನರಲ್ಲಿ ಇರುವ ತಪ್ಪು ಕಲ್ಪನೆಯನ್ನು ದೂರಮಾಡಬೇಕು. ಹಂತಹAತವಾಗಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳನ್ನೂ ಸಹ ಕ್ಷಯಮುಕ್ತ ಗ್ರಾಮ ಪಂಚಾಯತ್ ಆಗುವಂತೆ ಮಾಡಬೇಕು ಎಂದರು. 

 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ ಮಾತನಾಡಿ, ಕ್ಷಯ ಮುಕ್ತ ಅಭಿಯಾಣದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕತೇಯರು ತಪಾಸಣೆಗೆ ಮನೆ ಮನೆ ಭೇಟಿ ನೀಡಿದ ಸಂದರ್ಭದಲ್ಲಿ ಆಯಾ ವ್ಯಾಪ್ತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಅಗತ್ಯ ಸಹಕಾರ ನೀಡಬೇಕು ಎಂದರು. 

   ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಚಿದಾನಂದ ಸಂಜು ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತೀ ವರ್ಷ ಮಾರ್ಚ್ 24 ರಂದು ವಿಶ್ವ ಕ್ಷಯ ರೋಗ ದಿನವನ್ನಾಗಿ ಆಚರಿಸಲಾಗುತ್ತಿದೆ. ಜಿಲ್ಲೆಯಲ್ಲಿ ಈಗಾಗಲೇ ಕ್ಷಯವನ್ನು ಪತ್ತೆಹಚ್ಚಲು 3 ಸಿಬಿನ್ಯಾಟ್ ಯಂತ್ರಗಳು 8 ಟ್ರುನ್ಯಾಟ್ ಯಂತ್ರಗಳಿದ್ದು, ಪ್ರತೀ ವರ್ಷ 40,000-45,000 ಕ್ಷಯ ರೋಗ ಪರೀಕ್ಷೆಗಳನ್ನು ಮಾಡುವುದರೊಂದಿಗೆ ಸುಮಾರು 1,500 ಪ್ರಕರಣಗಳನ್ನು ಪತ್ತೆಹಚ್ಚಲಾಗುತ್ತಿದೆ. ಇದರಲ್ಲಿ 500-600 ಪ್ರಕರಣಗಳು ಹೊರ ಜಿಲ್ಲೆಗೆ ಸಂಬAಧಿಸಿದ್ದು, ಅವರುಗಳಿಗೂ ಸಹ ಚಿಕಿತ್ಸೆ ನೀಡಲಾಗಿರುತ್ತದೆ. ಕ್ಷಯರೋಗದಿಂದಾಗುವ ಮರಣ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕ್ಷಯರೋಗ ಲಕ್ಷಣ ಹೊಂದಿರುವವರನ್ನು ಮುಂಚಿತವಾಗಿಯೇ ಪತ್ತೆಹಚ್ಚಲು ಕೇಂದ್ರ ಸರ್ಕಾರ ಎಲ್ಲಾ ಜಿಲ್ಲೆಗಳಿಗೂ ಆಂಡ್ರಾಯ್ಡ್ ಎಕ್ಸರೇ ಯಂತ್ರವನ್ನು ನೀಡಿದೆ ಎಂದ ಅವರು, ಇದು ಶೀಘ್ರದಲ್ಲಿಯೇ ಜಿಲ್ಲೆಯಲ್ಲಿ ಅನುಷ್ಠಾನ ಮಾಡಲಾಗುವುದು ಎಂದರು. 

  ಕ್ಷಯ ಮುಕ್ತ ಭಾರತ್ ಅಭಿಯಾನಕ್ಕೆ ಇಂದು ಚಾಲನೆ ನೀಡಲಾಗಿದ್ದು, ಅಭಿಯಾನದಲ್ಲಿ ಸರ್ಕಾರ ಗುರುತಿಸಿರುವ ಕ್ಷಯ ರೋಗ ಭಾಧಿಸಬಹುದಾದ ಹಳ್ಳಿಗಳಲ್ಲಿ, ದುರ್ಬಲ ವರ್ಗಗಳ ಜನಾಂಗದವರು ವಾಸಿಸುವ ಜನವಸತಿ ಪ್ರದೇಶಗಳಲ್ಲಿ ಟಿ.ಬಿ ಸ್ಕಿçÃನಿಂಗ್ ನಡೆಸಿ, ರೋಗ ಲಕ್ಷಣಗಳು ಕಂಡುಬAದಲ್ಲಿ ಸೂಕ್ತ ಚಿಕಿತ್ಸೆ ನೀಡುವುದರೊಂದಿಗೆ ಗುಣಮುಖರಾಗಿ ಮಾಡಲಾಗುವುದು ಎಂದರು. 

   ಇದೇ ಸಂದರ್ಭದಲ್ಲಿ ಪ್ರಸಕ್ತ ಸಾಲಿನಲ್ಲಿ ಕ್ಷಯ ಮುಕ್ತ ಗ್ರಾಮ ಪಂಚಾಯತ್ ಎಂದು ಆಯ್ಕೆ ಮಾಡಲಾದ 64 ಗ್ರಾಮ ಪಂಚಾಯತ್‌ಗಳಲ್ಲಿ 18 ಗ್ರಾಮ ಪಂಚಾಯತ್‌ಗಳಿಗೆ ಕಂಚಿನ ಪದಕ, 26 ಗ್ರಾಮ ಪಂಚಾಯತ್‌ಗಳಿಗೆ ಬೆಳ್ಳಿ ಪದಕ ಹಾಗೂ 20 ಗ್ರಾಮ ಪಂಚಾಯತ್‌ಗಳಿಗೆ ಚಿನ್ನದ ಪದಕ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಯಿತು.  

    ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮರಾವ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ಲತಾ ನಾಯಕ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ, ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ್, ತಾಲೂಕು ಆರೋಗ್ಯಾಧಿಕಾರಿಗಳು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. 

   ಪ್ರಶಾಂತ್ ಶೆಟ್ಟಿ ಸ್ವಾಗತಿಸಿ, ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಆಲಂದೂರು ಮಂಜುನಾಥ ಎಸ್ ಗಾಣಿಗ ನಿರೂಪಿಸಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಜೈನ್ ವಂದಿಸಿದರು. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು