ಮಹಿಳಾ ದಿನಾಚರಣೆ ಸಪ್ತಾಹ ಸಮಾರೋಪ

ಉಡುಪಿ : ಇಂದು ವಿವಿಧ ಕ್ಷೇತ್ರಗಳಲ್ಲಿ ಮಹಿಳಿಗೆ ಗೌರವಾನ್ವಿತ ಸ್ಥಾನಮಾನ ದೊರೆತರೂ ಇನ್ನೂ ಸಮಾನತೆ ಮರೀಚಿಕೆಯಾಗಿದೆ. ಮಹಿಳೆ ಆರ್ಥಿಕವಾಗಿ ಸಬಲೀಕರಣಗೊಂಡರೆ ಸಮಾನತೆಯನ್ನು ಪಡೆಯಲು ಸಾಧ್ಯ. ಈ ದೃಷ್ಠಿಯಿಂದ ಅರಿವು ಮೂಡಿಸುವ  ಅಂತರಾಷ್ಟ್ರೀಯ ಮಹಿಳಾ ದಿನಾಚರಣಾ ಸಪ್ತಾಹವು ಒಂದು ಸಾರ್ಥಕ ಕಾರ್ಯಕ್ರಮವಾಗಿದೆ ಎಂದು ಖ್ಯಾತ ಚಲನಚಿತ್ರ ನಟಿ ಗೀತಾ ಸುರತ್ಕಲ್ ಹೇಳಿದರು. ಅವರು ಭಾರತೀಯ ರೆಡ್ ಕ್ರಾಸ್ ಉಡುಪಿ ಜಿಲ್ಲೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಉಡುಪಿ ಜಿಲ್ಲಾ ಲೇಖಕಿಯರ ವಾಚಕಿಯರ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ  ಅಂತರಾಷ್ಟ್ರೀಯ ಮಹಿಳಾ ಸಪ್ತಾಹ ಕಾರ್ಯಕ್ರಮದ ಸಮಾರೋಪ ಕಾರ್ಯಕ್ರಮದಲ್ಲಿ ಸಾಧಕ ಮಹಿಳೆಯರನ್ನು ಸನ್ಮಾನಿಸಿ ಮಹಿಳೆ ರಂಗಭೂಮಿ ಮತ್ತು ಕಾರಂತರ ಬರಹಗಳು ಎಂಬ ವಿಷಯದಲ್ಲಿ ಉಪನ್ಯಾಸ ನೀಡುತ್ತಿದ್ದರು. ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ರೆಡ್ ಕ್ರಾಸ್ ಸಭಾಪತಿ ಬಸರೂರು ರಾಜೀವ ಶೆಟ್ಟಿ ವಹಿಸಿದ್ದರು. ಸಮಾರೋಪ ಭಾಷಣ ಮಾಡಿದ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ. ಗಣನಾಥ ಎಕ್ಕಾರು ಮಹಿಳಾ ದಿನಾಚರಣೆ ಸಪ್ತಾಹ ಸಾವಿರಾರು ವಿದ್ಯಾರ್ಥಿಗಳಲ್ಲಿ ಮಹಿಳಾ ಸಮಾನತೆಯ ಅರಿವು ಮೂಡಿಸಲು ಸಹಕಾರಿಯಾಗಿದೆ ಎಂದರು.

ಪ್ರಾಧ್ಯಾಪಕಿ ದಿವ್ಯಾ ಎಂ. ಎಸ್ ಪ್ರಾರ್ಥಿಸಿದರು. ಡಾ. ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿ ಪೂರ್ಣಿಮ ಸ್ವಾಗತಿಸಿದರು. ರೆಡ್‌ಕ್ರಾಸ್ ವತಿಯಿಂದ ಅಂತರಾಷ್ಟಿçÃಯ ಮಹಿಳಾ ದಿನಾಚರಣೆಯ ಅಂಗವಾಗಿ ಡಾ. ಪಾರ್ವತಿ ಜಿ. ಐತಾಳ್, ಕ್ಯಾಪ್ಟನ್ ಡಾ. ಸುಕನ್ಯಾ ಮಾರ್ಟಿಸ್, ಸುಜಯ ಕೆ.ಎಸ್. ಶ್ಯಾಮಲಾ ಸಿ.ಕೆ. ಕುಸುಮಾ ಕಾಮತ್ ಅವರನ್ನು ಸನ್ಮಾನಿಸಲಾಯಿತು. ರಂಗವಲ್ಲಿ ಮೂಲಕ ಮಾನವ ಹಕ್ಕುಗಳ ಪರಿಚಯ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. 

ರೆಡ್ ಕ್ರಾಸ್ ಆಡಳಿತ ಮಂಡಳಿಯ ಸದಸ್ಯರಾದ ವಿ.ಜಿ. ಶೆಟ್ಟಿ, ಟಿ. ಚಂದ್ರಶೇಖರ್ ಖಚಾಂಚಿ ರಮಾದೇವಿ ಕಾರಂತ ಟ್ರಸ್ಟಿನ ಸದಸ್ಯರಾದ ಡಾ. ಭಾರತಿ ಮರವಂತೆ. ಮಹಮ್ಮದ್ ಶರೀಫ್, ಸತೀಶ್ ಕೊಡವೂರು ಉಪಸ್ಥಿತರಿದ್ದರು. ಜಿಲ್ಲಾ ಲೇಖಕಿಯರ ವಾಚಕಿಯರ ಸಂಘದ ಅಧ್ಯಕ್ಷೆ ಡಾ.ನಿಕೇತನ ವಂದಿಸಿದರೆ, ಉಪನ್ಯಾಸಕಿ ಶಾಲಿನಿ ಕಾರ್ಯಕ್ರಮ ನಿರ್ವಹಿಸಿದರು. ಸಪ್ತಾಹದ ಅಂಗವಾಗಿ ಉಡುಪಿ ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು