ಹೆಬ್ರಿ ತಾಲೂಕಿನ ಬೇಳಂಜೆ ನಿವಾಸಿ ಸಾತ್ವಿಕ್ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದು ರಜೆಯಲ್ಲಿ ತನ್ನ ವಿದ್ಯಾಭ್ಯಾಸಕ್ಕೂ, ಮನೆಯ ಖರ್ಚಿಗೂ ಸಹಾಯವಾಗಲಿ ಎಂಬ ಉದ್ದೇಶದಿಂದ ಕೆಲಸಕ್ಕೆ ಹೋಗಿದ್ದು, ನಿನ್ನೆ ಹೆಬ್ರಿ ಹುತುರ್ಕೆ ಎಂಬಲ್ಲಿ ಕೆಲಸ ಮಾಡುವಾಗ ಏಣಿಯಿಂದ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ.
ಸಾತ್ವಿಕ್ ಮೊನ್ನೆಯಷ್ಟೆ ಪಿಯುಸಿ ಪರೀಕ್ಷೆ ಮುಗಿಸಿದ್ದ. ಮುಂದಿನ ಹಂತ ಡಿಗ್ರಿ ವಿದ್ಯಾಭ್ಯಾಸ. ಅದಕ್ಕಾಗಿ ಹಣ ಬೇಕು, ಮನೆಯವರಿಗೂ ಕೈಲಾದ ಸಹಾಯ ಮಾಡಬೇಕು ಎಂಬ ದೃಷ್ಟಿಯಿಂದ ರಜೆಯಲ್ಲಿ ಕೆಲಸಕ್ಕೆ ಹೋಗಿದ್ದ. ಕೆಲಸಕ್ಕೆ ಹೋದವನು ಮನೆಗೆ ಮರಳಿ ಬಾರದೆ ಒಂದು ದುರ್ಘಟನೆಯಲ್ಲಿ ತನ್ನ ಪ್ರಾಣ ಕಳೆದುಕೊಂಡಿದ್ದಾನೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 ಕಾಮೆಂಟ್‌ಗಳು