ವೈಯಕ್ತಿಕ ಕಾರಣದಿಂದ ಮನನೊಂದ ನರ್ಸಿಂಗ್ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ಕಡಬ ರೆಂಜಿಲಾಡಿಯ ಲಾರೆನ್ಸ್ ಎಂಬವರ ಮಗಳು ಸ್ವೀಟಿ(18) ಎಂದು ಗುರುತಿಸಲಾಗಿದೆ.
ಇವರು ಉಡುಪಿಯ ನರ್ಸಿಂಗ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಆಸ್ಪತ್ರೆಯ ವಸತಿ ನಿಲಯದಲ್ಲಿ ತರಗತಿ ಮುಗಿದ ನಂತರ ಉಳಿದುಕೊಳ್ಳುತ್ತಿದ್ದರು ಎಂದು ತಿಳಿದು ಬಂದಿದೆ.
ಫೆ.25ರಂದು ರಾತ್ರಿ ವಸತಿ ನಿಲಯದಲ್ಲಿರುವಾಗ ಇಲಿ ಪಾಷಣಾ ಸೇವನೆ ಮಾಡಿದ್ದಾಳೆ ಎಂದು ಹೇಳಲಾಗಿದೆ.
ತಕ್ಷಣ ಆಕೆಯನ್ನು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಯಿತು ಎಂದು ತಿಳಿದು ಬಂದಿದೆ.
ಆದರೆ ಗಂಭೀರ ಸ್ಥಿತಿಯಲ್ಲಿದ್ದ ಅವರು, ಮಾ.3ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ತಿಳಿದು ಬಂದಿದೆ.
ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 ಕಾಮೆಂಟ್‌ಗಳು