ಕಾರು ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದು, ಪಾಂಗಾಳ ಕಟ್ಟಿಕೆರೆಗೆ ಸಮೀಪಿಸುತ್ತಿದ್ದಂತೆ ಈ ದುರ್ಘಟನೆ ಸಂಭವಿಸಿದೆ.
ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿದರೆ, ಇಬ್ಬರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು Kia (KA20MD0244) ಕಾರು ಚಾಲಕ ಶ್ರೇಯಸ್ ಆಚಾರ್ ಎಂದು ಗುರುತಿಸಲಾಗಿದೆ. ಡಾರ್ವಿನ್ ಮಣಿಪಾಲ, ಸೂರ್ಯ ಮಣಿಪಾಲ ತೀವ್ರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಕಾಪು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

0 ಕಾಮೆಂಟ್‌ಗಳು