ನಿಟ್ಟೆ : ಕಾರು-ಬೈಕ್ ನಡುವೆ ಭೀಕರ ಅಪಘಾತ; ತಂದೆ ಸಾವು, ಮಗಳು ಗಂಭೀರ!

ಕಾರು ಮತ್ತ ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತಂದೆ ಸಾವನಪ್ಪಿ ಮಗಳು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯ ನಿಟ್ಟೆ ಗ್ರಾಮದ ‘ನಿಟ್ಟೆ ಫಾರ್ ಎವರ್’ ಹೋಟೆಲ್ ಮುಂಭಾಗ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ.

ಕಾರ್ಕಳದ ನಿವಾಸಿ ನವೀನ್ ಚಂದ್ರ ಅವರು ತನ್ನ ಮಗಳು ಪ್ರೇರಣಾ ಅವರನ್ನು ಬೈಕ್‌ನಲ್ಲಿ ಕುಳ್ಳಿರಿಸಿಕೊಂಡು ನಿಟ್ಟೆ ಕಡೆಯಿಂದ ಕಾರ್ಕಳಕ್ಕೆ ಬರುತ್ತಿದ್ದರು. ಈ ವೇಳೆ ಕಾರ್ಕಳ ಕಡೆಯಿಂದ ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ತೀರಾ ಬಲಬದಿಗೆ ಬಂದು ಬೈಕ್‌ಗೆ ನೇರವಾಗಿ ಢಿಕ್ಕಿ ಹೊಡೆದಿದ್ದಾನೆ.

ಅಪಘಾತದ ತೀವ್ರತೆಗೆ ತೀವ್ರವಾಗಿ ಗಾಯಗೊಂಡಿದ್ದ ನವೀನ್ ಚಂದ್ರ ಅವರನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮಗಳು ಪ್ರೇರಣಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕನ ವಿರುದ್ಧ ಬಿಎನ್‌ಎಸ್ (BNS) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು