ಸಾಧನೆ ಮಾಡಲು ಅವರ ತಂದೆ ತಾಯಿ, ಗುರುಹಿರಿಯರ ಮಾರ್ಗದರ್ಶನ ಅತ್ಯಂತ ಮುಖ್ಯವಾಗಿತ್ತು. ಮಗಳ ಸಾಧನೆಯ ಯಶಸ್ವಿ ನಲ್ಲಿ ಹೆಚ್ಚು ಸಂಭ್ರಮ ಪಡುವವರು ಸಾಧಕಿಯ ತಾಯಿ ಆಗಿರುತ್ತಾರೆ.ಮಕ್ಕಳ ಲಾಲನೆ ಪಾಲನೆಯಲ್ಲಿ ತಾಯಿ ಪ್ರಮುಖ ಪಾತ್ರ ವಹಿಸುತ್ತಾಳೆ. ವಿದ್ಯಾರ್ಥಿನಿ ಶಾಲೆ ಮತ್ತು ಮನೆಯ ಕೀರ್ತಿಯನ್ನು ಹೆಚ್ಚಿಸಿದ್ದಾಳೆ ಎಂದು ಅಧ್ಯಕ್ಷ ಪಾಂಡುರಂಗ ಪೈ ಸಿದ್ಧಾಪುರ ಮಾತನಾಡಿದರು.
ಪಿ.ಆರ್. ಎನ್ ಅಮೃತ ಭಾರತಿ ವಿದ್ಯಾ ಕೇಂದ್ರ ಸಿಬಿಎಸ್ಇ ವಿಭಾಗದ ಹತ್ತನೇ ತರಗತಿಯ ವಿದ್ಯಾರ್ಥಿನಿ ಧನ್ವಿ ಹೆಬ್ಬಾರ್ ಇವರಿಗೆ ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಸನ್ಮಾನಿಸಿ ಮಾತನಾಡಿದರು.
ವಿದ್ಯಾ ಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಆಯೋಜಿಸಿದ ಅಂಗಳ - 2026 ಸನ್ಮಾನ ಕಾರ್ಯಕ್ರಮ ಹೆಬ್ರಿ ನೆಹರು ನಗರದ ಬಾಲಚಂದ್ರ ಹೆಬ್ಬಾರ್ ಅವರ ಸ್ವಗೃಹ ರಾಮಧಾಮದಲ್ಲಿ ನಡೆಯಿತು.
ವಿದ್ಯಾ ಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಶೈಕ್ಷಣಿಕ ಸಂಯೋಜಿತ ಸಂಸ್ಥೆಗಳ 10ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಸಂಸ್ಥೆಗೆ ಟಾಪರ್ ಆಗಿರುವ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಿದೆ.
ಸಮಾರಂಭದ ವೇದಿಕೆಯಲ್ಲಿ ವಿದ್ಯಾಭಾರತಿ ಕರ್ನಾಟಕ ಪ್ರಾಂತ ಉಪಾಧ್ಯಕ್ಷರು ಶ್ರೀ ಗುರುದಾಸ್ ಶೆಣೈ ಹೆಬ್ರಿ, ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾ ಅಧ್ಯಕ್ಷರು ಪಾಂಡುರಂಗ ಪೈ ಸಿದ್ದಾಪುರ, ಸಾಧಕಿಯ ತಂದೆ- ತಾಯಿಯವರಾದ ಬಾಲಚಂದ್ರ ಹೆಬ್ಬಾರ್ ಮತ್ತು ಶ್ರೀಮತಿ ಸುಮಲತಾ ಹೆಬ್ಬಾರ್, ಸಾಧಕಿ ಧನ್ವಿ ಹೆಬ್ಬಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾ ಕಾರ್ಯದರ್ಶಿ ಮಹೇಶ್ ಹೈಕಾಡಿ ,ಚಾರ ಇವರು ಕಾರ್ಯಕ್ರಮವನ್ನು ಸಂಘಟಿಸಿ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾ ಶಾರೀರಿಕ ಪ್ರಮುಖ್ ವಿಜಯ ಕುಮಾರ ಶೆಟ್ಟಿ, ಅಮೃತ ಭಾರತಿ ವಿದ್ಯಾ ಕೇಂದ್ರದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಅನಿತಾ, ಅಮೃತ ಭಾರತಿ ವಿದ್ಯಾಲಯದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಅಪರ್ಣಾ ಆಚಾರ್ ಉಪಸ್ಥಿತರಿದ್ದರು.

0 ಕಾಮೆಂಟ್‌ಗಳು